ಕರ್ನಾಟಕ

karnataka

ETV Bharat / state

ಎಸ್​ಡಿಪಿಐ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

Section 144 enforced in Mysuru city: ಮೈಸೂರು ನಗರ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಪೊಲೀಸ್​ ಕಮಿಷನರ್ ರಮೇಶ್ ಬಾನೋತ್ ತಿಳಿಸಿದ್ದಾರೆ.

enforcement-of-section-144-in-mysore-city-limits-due-to-sdpi-protest
ಎಸ್​ಡಿಪಿಐಯ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಮೈಸೂರು ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ

By ETV Bharat Karnataka Team

Published : Oct 31, 2023, 7:51 PM IST

Updated : Oct 31, 2023, 8:12 PM IST

ಪೊಲೀಸ್​ ಕಮಿಷನರ್ ರಮೇಶ್ ಬಾನೋತ್ ಪ್ರತಿಭಟನೆ

ಮೈಸೂರು: "ಇಸ್ರೇಲ್​-ಪ್ಯಾಲೆಸ್ಟೈನ್ ನಡುವೆ ಸಂಘರ್ಷ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧೆಡೆ ಪರ -ವಿರೋಧ ಪ್ರತಿಭಟನೆಗಳು ನಡೆಯುತ್ತಿವೆ. ಅದರಂತೆ ಮೈಸೂರು ನಗರದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ಎಸ್​ಡಿಪಿಐ ಸಂಘಟನೆಯವರು ಮನವಿ ಮಾಡಿದ್ದರು. ಅವರ ಮನವಿಯನ್ನು ನಾವು ತಿರಸ್ಕರಿಸಿದ್ದೇವೆ" ಎಂದು ಮೈಸೂರು ನಗರ ಪೊಲೀಸ್​ ಕಮಿಷನರ್ ರಮೇಶ್ ಬಾನೋತ್ ತಿಳಿಸಿದರು. ಮೈಸೂರು ನಗರದ ಪೊಲೀಸ್​ ಕಮಿಷನರ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

"ಸಾಮಾಜಿಕ ಮಾಧ್ಯಮಗಳಲ್ಲಿ 3 ಗಂಟೆಗೆ ಸಾಮೂಹಿಕ ಪ್ರತಿಭಟನೆಗೆ ಬನ್ನಿ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಇವತ್ತು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಇಸ್ರೇಲ್​ - ಪ್ಯಾಲೆಸ್ಟೈನ್ ವಿಚಾರವಾಗಿ ಪರ-ವಿರೋಧವಾಗಿ ಯಾವುದೇ ಸಭೆ -ಸಮಾರಂಭ, ರ‍್ಯಾಲಿ, ಪ್ರತಿಭಟನೆ ನಡೆಸುವುದನ್ನು ನಿಷೇಧಿಸಿ ಕಲಂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮಿಲಾದ್ ಪಾರ್ಕ್​​​ ಹಾಗೂ ಮೈಸೂರು ನಗರ ವ್ಯಾಪ್ತಿಯಲ್ಲಿ ಈ ವಿಷಯ ಸಂಬಂಧ ಪರ-ವಿರೋಧ ಘೋಷನೆ ಕೂಗುವುದು, ಪ್ರತಿಭಟನೆ ಮಾಡುವುದು, ಗುಂಪು ಸೇರಿ ಚರ್ಚಿಸುವುದು ಮತ್ತು ಈ ವಿಚಾರವಾಗಿ ನೀಡುವ ಹೇಳಿಕೆಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ" ಎಂದರು.

"ಯಾರಾದರೂ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡಿದ್ದಾರೆಂದು ಕೆಲವರು ಸುಳ್ಳು ಸುದ್ದಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುತ್ತಿದ್ದಾರೆ. ಈ ರೀತಿ ಮಾಡಿದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ" ಎಂದರು.

ಇದನ್ನೂ ಓದಿ:ಮರಾಠ ಮೀಸಲಾತಿ ಹೋರಾಟ ಅವರ ಆಂತರಿಕ ವಿಚಾರ, ಕರ್ನಾಟಕದ ಬಸ್​ಗಳಿಗೆ ಬೆಂಕಿ ಹಚ್ಚೋರು ಇದನ್ನು ಅರ್ಥ ಮಾಡಿಕೊಳ್ಳಬೇಕು: ಸಚಿವ ರಾಮಲಿಂಗಾರೆಡ್ಡಿ

Last Updated : Oct 31, 2023, 8:12 PM IST

ABOUT THE AUTHOR

...view details