ಮೈಸೂರು: ರಾಯಲ್ ಎನ್ಫೀಲ್ಡ್(RE) ಬೈಕ್ ಖರೀದಿಗೆ ಪೋಷಕರು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಬೇಸರಗೊಂಡ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕುವೆಂಪು ನಗರದ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ಅಜಯ್ (25) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಇವರು, ಲಾಕ್‌ಡೌನ್ ಹಿನ್ನೆಲೆಯಲ್ಲಿ ವರ್ಕ್ ಫ್ರಂ ಹೋಂ ಮಾಡುತ್ತಿದ್ದರು.