ಕರ್ನಾಟಕ

karnataka

ETV Bharat / state

ಇಂದಿನಿಂದ ಗುರುವಾರ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ನಿಷೇಧ - ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಅಕ್ಟೋಬರ್ 5ರ ಬೆಳಗಿನ ಜಾವ 4 ಗಂಟೆಯಿಂದ 07ರ ಮಧ್ಯಾಹ್ನದವರೆಗೂ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಎಂದಿನಂತೆ ನಡೆಯಲಿದೆ.

ಚಾಮುಂಡಿ ಬೆಟ್ಟ
ಚಾಮುಂಡಿ ಬೆಟ್ಟ

By

Published : Oct 5, 2021, 9:02 AM IST

ಮೈಸೂರು: ಅಕ್ಟೋಬರ್ 6 ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದಿನಿಂದ ಗುರುವಾರ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ನಾಳೆ ಮಹಾಲಯ ಅಮಾವಾಸ್ಯೆ ಇದ್ದು ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.

ಅದೇ ರೀತಿ, ಅಕ್ಟೋಬರ್ 7ರಂದು ವಿಶ್ವವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸವ ನೆರವೇರಲಿದೆ. ಆದ್ದರಿಂದ ಅಕ್ಟೋಬರ್ 5ರ ಬೆಳಗಿನ ಜಾವ 4 ಗಂಟೆಯಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ. ಆದರೆ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಎಂದಿನಂತೆ ನಡೆಯಲಿದೆ.

ಅಕ್ಟೋಬರ್ 7 ರಂದು ನಡೆಯಲಿರುವ ದಸರಾ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವ ಗಣ್ಯರಿಗೆ ಈ ನಿಷೇಧ ಅನ್ವಯಿಸುವುದಿಲ್ಲ‌.

ABOUT THE AUTHOR

...view details