ಮೈಸೂರು:ಕೊರೊನಾ ಭೀತಿ ಹೆಚ್ಚಾಳವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ವಾಟಾಳ್ ನಾಗರಾಜ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಹಾವಳಿಯಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದು ಕಷ್ಟವಾಗಲಿದೆ. ಪದವಿ ಪರೀಕ್ಷೆ ಮುಂದೂಡಿದಂತೆ ಈ ಪರೀಕ್ಷೆಯನ್ನು ಮುಂದೂಡಬೇಕೆಂದು ಆಗ್ರಹಿಸಿದ್ದಾರೆ.