ಮೈಸೂರು:ಕಪಿಲ ನದಿ ತಟದ ಸುತ್ತೂರು ಶ್ರೀ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಗಿದೆ. ಇನ್ನೂ ಆರು ದಿನ ಜಾತ್ರಾ ಮಹೋತ್ಸವದ ಸೊಬಗೇ ಸೊಬಗು..
ಇಂದಿನಿಂದ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಮಹೋತ್ಸವ ಶುರು.. - Former Chief Minister Weerappamoyli
ಇಂದಿನಿಂದ ಸುತ್ತೂರು ಶ್ರೀ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ಸಿಕ್ಕಿದೆ.
fair of Shivarathreeshwara Shivayogi Shri Jagadguru at suttur
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿರುವ ವಸ್ತು ಪ್ರದರ್ಶನ, ಕೃಷಿಮೇಳವನ್ನು ಸಚಿವ ಮಾಧುಸ್ವಾಮಿ, ಮಾಜಿ ಸಿಎಂ ಎಂ. ವೀರಪ್ಪ ಮೊಯ್ಲಿ ಅವರು ಉದ್ಘಾಟಿಸಿದರೆ, ರಂಗೋಲಿ, ಸೋಬಾನೆ ಪದ, ದೇಸಿ ಆಟಗಳ ಸ್ಪರ್ಧೆ ಸೇರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಾಲನೆ ನೀಡಿದರು. ಸುತ್ತೂರು ಮಠದ ಪೀಠಾಧಿಪತಿ ಡಾ.ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿ ಹಲವು ಸ್ವಾಮೀಜಿಗಳು ಸಾನಿಧ್ಯವಹಿಸಿದ್ದರು.
ಈ ವೀರಭದ್ರೇಶ್ವರ ಕೊಂಡೋತ್ಸವ ಕೂಡ ಮೊದಲನೆಯ ದಿನ ನಡೆಯಲಿದೆ. ಜಾತ್ರೆಗೆ ಬರುವ ಭಕ್ತರಿಗಾಗಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.