ಮೈಸೂರು:ಸಾಲಬಾಧೆ ತಾಳಲಾರದೆ ರೈತನೋರ್ವ ನೇಣಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.
ರಘು (42) ನೇಣಿಗ ಶರಣಾದ ರೈತ. ಈತ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ನಿವಾಸಿಯಾಗಿದ್ದು, ಬೆಳೆ ಬೆಳೆಯುವುದಕ್ಕೆ ಕೃಷಿ ಸಹಕಾರ ಸಂಘದಲ್ಲಿ 1.90 ಲಕ್ಷ ಸಾಲ ಮತ್ತು ಖಾಸಗಿ ಫೈನಾನ್ಸ್ಗಳಿಂದ 3 ಲಕ್ಷ ಸಾಲ ಪಡೆದುಕೊಂಡಿದ್ದ ಎನ್ನಲಾಗಿದೆ.
ಸಾಲಬಾಧೆ ತಾಳಲಾರದೆ ಪಿರಿಯಾಪಟ್ಟಣದಲ್ಲಿ ರೈತ ನೇಣಿಗೆ ಶರಣು - Farmer committed suicide
ಕೃಷಿಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
Mysore
ಸರಿಯಾದ ಬೆಳೆ ಬಾರದ ಕಾರಣ ಬೆಳೆ ನಷ್ಟದಿಂದಾಗಿ ಸಾಲ ತೀರಿಸಲು ಸಾಧ್ಯವಾಗದೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.