ಮೈಸೂರು :ಜೀವನಕ್ಕೆ ಆಧಾರವಾಗಿದ್ದ ಜಮೀನನ್ನು ಪ್ರಭಾವಿಯೊಬ್ಬರು ಒತ್ತುವರಿ ಮಾಡಿಕೊಂಡು ಹಿಂಸೆ ನೀಡುತ್ತಿದ್ದಾರೆ ಎಂದು ಮನನೊಂದ ರೈತ ದಯಾಮರಣ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಹೆಚ್.ಡಿ.ಕೋಟೆ ತಾಲೂಕಿನ ವಡ್ಡರಪಾಳ್ಯ ರೈತನೋರ್ವ ಗ್ರಾಮದ ಹೊರವಲಯದಲ್ಲಿ 2 ಎಕರೆ 3ಕುಂಟೆ ಪಿತ್ರಾರ್ಜಿತ ಜಮೀನನ್ನು ಹೊಂದಿದ್ದು, ಪ್ರಭಾವಿಯೊಬ್ಬರು ತನ್ನ 30 ಗುಂಟೆ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ನ್ಯಾಯ ಕೇಳಲು ಹೋದಾಗ ಅವರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಜೊತೆಗೆ ಪೊಲೀಸ್ ಠಾಣೆಗೆ ಹೋದರೂ ಅಲ್ಲಿಯೂ ನ್ಯಾಯ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.