ಮೈಸೂರು: ರೈತನೊಬ್ಬ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಳತೂರು ಗ್ರಾಮದಲ್ಲಿ ನಡೆದಿದೆ.
ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ರೈತ ಸಾವು - undefined
ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ.
![ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ರೈತ ಸಾವು farmer killed](https://etvbharatimages.akamaized.net/etvbharat/prod-images/768-512-8635045-719-8635045-1598945358025.jpg)
ರೈತ ಸಾವು
ಮಹದೇವ (37) ಮೃತ ರೈತ. ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ನಿಂದ ಉಳುಮೆ ಮಾಡುತ್ತಿದ್ದಾಗ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಪರಿಣಾಮ ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ರೈತ ಸಾವನ್ನಪ್ಪಿದ್ದಾನೆ.
ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.