ಮೈಸೂರು:ಕೆಆರ್ಎಸ್ ಡ್ಯಾಂಗೆ ಅಪಾಯವಾಗಬಹುದಾದ ಡಿಸ್ನಿಲ್ಯಾಂಡ್ ಯೋಜನೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ ಎಂದು ರೈತ ಸಂಘದ ಮುಖಂಡ ಹೊಸಕೋಟೆ ಬಸವರಾಜು ಹೇಳಿದ್ದಾರೆ.
ರೈತ ಮುಖಂಡ ಹೊಸಕೋಟೆ ಬಸವರಾಜು ಕೆಆರ್ಎಸ್ ಹಿಂಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದಲ್ಲಿ 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಡಿಸ್ನಿಲ್ಯಾಂಡ್ ಮಾದರಿ ಯೋಜನೆಯ ಕುರಿತು ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಭಾಂಗಣದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ್ದ ಬಸವರಾಜು, ಈ ಯೋಜನೆ ಕೈಗೊಂಡರೆ ಡ್ಯಾಂಗೆ ಅಪಾಯವಿದೆ. ಕೂಡಲೇ ಈ ಯೋಜನೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.
ಬಳಿಕ ಈಟಿವಿ ಭಾರತದೊಂದಿಗೆ ಮಾತನಾಡಿ, ಸಮ್ಮಿಶ್ರ ಸರ್ಕಾರದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಘೋಷಿಸಿದ್ದರು. ಆದರೆ ಮಂಡ್ಯ, ಮೈಸೂರು ಭಾಗದ ರೈತರು ಮತ್ತು ಪ್ರಗತಿಪರರ ವಿರೋಧದಿಂದ ಯೋಜನೆಯನ್ನು ಕೈಬಿಡಲಾಯಿತು. ಆದರೆ ಈಗ ಪ್ರಸ್ತುತ ಬಿಜೆಪಿ ಸರ್ಕಾರ ಡಿಸ್ನಿಲ್ಯಾಂಡ್ ಯೋಜನೆ ಜಾರಿಗೆ ಮುಂದಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಶುಕ್ರವಾರ ಮೈಸೂರಿನಲ್ಲಿ ಈ ಕುರಿತು ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ. ಈ ಯೋಜನೆಯಿಂದ ಡ್ಯಾಂಗೆ ತೊಂದರೆಯಾಗುತ್ತದೆ. ಕೂಡಲೇ ಡಿಸ್ನಿಲ್ಯಾಂಡ್ ಯೋಜನೆಯನ್ನು ಕೈಬಿಡಬೇಕು. ಇಲ್ಲದಿದ್ದರೆ ರೈತ ಸಂಘದಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹೊಸಕೋಟೆ ಬಸವರಾಜು ತಿಳಿಸಿದರು.