ಮೈಸೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿ ತರಬಾರದು ಎಂದು ರೈತ ಮುಖಂಡರು ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಕುರುಬೂರು ಶಾಂತಕುಮಾರ್ ಮಾತನಾಡಿದರು.
ಇಂದು ಮೈಸೂರಿನ ಟಿ ಕೆ.ಲೇಔಟ್ನಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದ ರೈತ ಮುಖಂಡರು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರೈತ ಮುಖಂಡ ಕುರಬೂರು ಶಾಂತಕುಮಾರ್, ಇಂದು ಸಿಎಂ ಅವರನ್ನು ಭೇಟಿಯಾಗಿ, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಅದರಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ರಾಜ್ಯದಲ್ಲಿ ಜಾರಿಗೆ ತರಬಾರದು.
ಕಾಯ್ದೆ ರದ್ದುಗೊಳಿಸಬೇಕು ಎಂಬ ಪ್ರಮುಖ ಅಂಶಗಳ ಜೊತೆಗೆ, ಕಬ್ಬಿಗೆ ಪ್ರತಿ ಟನ್ಗೆ ಹೆಚ್ಚಿಗೆ ಹಣ ನೀಡಬೇಕು. ಅದರ ಜೊತೆಗೆ ಪ್ರತಿ ಟನ್ಗೆ ನೀಡುವ ಹಣದ ಜೊತೆಗೆ ಕಟಾವು ಸಾಗಣೆ ವೆಚ್ಚವನ್ನು ಸೇರಿಸಬಾರದು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.