ಮೈಸೂರು:ನಂಜನಗೂಡು ಪಟ್ಟಣದ ನಂಜುಂಡೇಶ್ವರ ದೇವಾಲಯದ ತಗ್ಗು ಪ್ರದೇಶದಲ್ಲಿ ಜಲಾವೃತಗೊಂಡ ಬಡಾವಣೆಗಳಿಗೆ ಮಾಜಿ ಸಂಸದ ಆರ್.ಧ್ರುವನಾರಾಯಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇರಳದ ವಯನಾಡ್ನಲ್ಲಿ ಸುರಿದ ಭೀಕರ ಮಳೆಗೆ ನಂಜನಗೂಡಿನ ಕಪಿಲಾ ನದಿಯ ಪ್ರವಾಹ ಉಕ್ಕಿ ಹರಿದು ಪಟ್ಟಣದ ಸಾವಿರಾರು ಕುಟುಂಬಗಳಿಂದು ಪರಿಹಾರ ಕೇಂದ್ರದ ಆಶ್ರಯ ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕೃತಿ ವಿಕೋಪ ನಿಧಿಯಿಂದ ಸಮಸ್ಯೆಗೆ ಈಡಾಗಿರುವ 16 ಜಿಲ್ಲೆಗಳಿಗೆ ಸರ್ಕಾರದಿಂದ ನೂರು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.
ಮೈಸೂರು ಜಿಲ್ಲೆಗೆ 500 ಕೋಟಿ ಬಿಡುಗಡೆ ಮಾಡುವಂತೆ ಮಾಜಿ ಸಂಸದ ಆರ್.ಧ್ರುವನಾರಾಯಣ್ ಒತ್ತಾಯ ಮೈಸೂರು ಜಿಲ್ಲೆಯಲ್ಲಿ ನಾಲ್ಕು ತಾಲೂಕುಗಳು ಭೀಕರ ಪ್ರವಾಹದ ನೀರಿಗೆ ತುತ್ತಾಗಿ ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಜೊತೆಗೆ ಸಾಕಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ. ಇಷ್ಟಾದರೂ ಕೂಡಾ ಮುಖ್ಯಮಂತ್ರಿಗಳು ಮೈಸೂರು ಜಿಲ್ಲೆಗೆ ಇದುವರೆಗೂ ಸರ್ಕಾರದ ವತಿಯಿಂದ ಹಣ ಮಂಜೂರು ಮಾಡಿಲ್ಲ ಎಂದು ಆರೋಪಿಸಿದರು.
ಇತರೆ ಜಿಲ್ಲೆಗಳಿಗೆ ಸರ್ಕಾರದ ಅಧೀನ ಕಾರ್ಯದರ್ಶಿಯನ್ನು ಪರಿಶೀಲನಾ ವಿಶೇಷ ಅಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆ. ಆದರೆ ಮೈಸೂರು ಜಿಲ್ಲೆಗೆ ವಿಶೇಷ ಅಧಿಕಾರಿಯನ್ನು ನೇಮಕ ಮಾಡಿಲ್ಲ. ಜಿಲ್ಲೆಗೆ ಐದುನೂರು ಕೋಟಿ ಅನುದಾನ ಬಿಡುಗಡೆ ಮಾಡಿ, ಸಂತ್ರಸ್ತರ ಕುಟುಂಬಗಳಿಗೆ ಉತ್ತಮ ಜೀವನ ರೂಪಿಸಿಕೊಳ್ಳಲು ಸರ್ಕಾರದ ಅಧೀನ ಕಾರ್ಯದರ್ಶಿಗಳನ್ನು ಜಿಲ್ಲೆಗೆ ನೇಮಕ ಮಾಡಿ ಎಂದು ಆಗ್ರಹಿಸಿದರು.