ಕರ್ನಾಟಕ

karnataka

ETV Bharat / state

ರಾಷ್ಟ್ರೀಯ ಹೆದ್ದಾರಿ ಬಂದ್, ಉರುಳು ಸೇವೆ ಮಾಡಿ ಕಬ್ಬು ಬೆಳೆಗಾರರ ಪ್ರತಿಭಟನೆ

ರಾಜ್ಯದಲ್ಲಿನ ಕಬ್ಬು ಬೆಳೆಗಾರರ ಬೇಡಿಕೆಯನ್ನು ಪೂರೈಸುವಂತೆ ಒತ್ತಾಯಿಸಿ ರೈತರು ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಿ, ರಸ್ತೆಯಲ್ಲಿ ಉರುಳುಸೇವೆ ಮಾಡಿದರು.

farmers-protest-at-mysore
ಕಬ್ಬು ಬೆಳೆಗಾರರ ಬೇಡಿಕೆ ಪೂರೈಸುವಂತೆ ಒತ್ತಾಯ :ರಾಷ್ಟ್ರೀಯ ಹೆದ್ದಾರಿ ಬಂದ್, ಉರುಳು ಸೇವೆ ಮಾಡಿ ರೈತರ ಪ್ರತಿಭಟನೆ

By

Published : Oct 27, 2022, 10:27 PM IST

ಮೈಸೂರು: ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ರೈತರು ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದ್ದಾರೆ.

ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಎಪಿಎಂಪಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿ, ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ರೈತರು ಕಬ್ಬು ಬೆಳೆ ದರ ನಿಗದಿ ವಿಳಂಬ ನೀತಿಯನ್ನು ಖಂಡಿಸಿ ರಸ್ತೆಯಲ್ಲಿ ಉರುಳುಸೇವೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಕಬ್ಬಿಗೆ ಟನ್‌ಗೆ ಪಂಜಾಬ್​ನಲ್ಲಿ 3800 ರೂ, ಉತ್ತರ ಪ್ರದೇಶದಲ್ಲಿ 3500, ಗುಜರಾತ್ ನಲ್ಲಿ 4400 ರೂ. ದರ ನಿಗದಿ ಮಾಡಿದ್ದಾರೆ. ಇದನ್ನು ಗಮನಿಸಿ ಎಮ್​ಆರ್‌ಪಿ ಬೆಲೆಯನ್ನು ಕನಿಷ್ಠ ಇಳುವರಿಗೆ ಟನ್‌ಗೆ 3500 ರೂ.ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಕ್ಕೆ ರಾಜ್ಯದಲ್ಲಿನ 30 ಲಕ್ಷ ಕಬ್ಬು ಬೆಳೆಗಾರರ ಹಿತರಕ್ಷಣೆ ಕಾಣದಾಗಿದೆ. ಮುಂದೆ ಚುನಾವಣೆ ಬರುತ್ತಿದೆ. ರಾಜ್ಯದ 38 ಸಕ್ಕರೆ ಕಾರ್ಖಾನೆ ಮಾಲೀಕತ್ವದ ಎಂಎಲ್ಎ, ಎಂಪಿ ಮಂತ್ರಿಗಳನ್ನು ಸೋಲಿಸಿ ಮನೆಗೆ ಕಳಿಸಿದರೆ ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುತ್ತದೆ. ರಾಜ್ಯ ಸರಕಾರ ಎಚ್ಚೆತ್ತುಕೊಳ್ಳದಿದ್ದರೆ 31ರಂದು ಆಯಾ ಜಿಲ್ಲೆಯ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚದಲ್ಲಿ , ಕಾರ್ಖಾನೆಯವರು ರೈತರನ್ನು ಸುಲಿಗೆ ಮಾಡುತ್ತಿದ್ದಾರೆ. ರಾಜ್ಯ ಸರಕಾರ ನಿಗದಿ ಮಾಡಿರುವ ಮಾರ್ಗಸೂಚಿಯಂತೆ ರೈತನ ಜಮೀನಿನಿಂದ ಕಾರ್ಖಾನೆ ನಡುವೆ ಇರುವ ಕಿಲೋಮೀಟರ್ ಆಧಾರದ ದರ ಕಡಿತ ಮಾಡಬೇಕು. ಕಾನೂನು ಬಾಹಿರವಾಗಿ ಹೆಚ್ಚುವರಿ ಮಾಡಿದರೆ ಆಯಾ ಜಿಲ್ಲಾಧಿಕಾರಿಗಳು ಕಾರ್ಖಾನೆಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

ಇದನ್ನೂ ಓದಿ :ಕೂಲಿ ಕಾರ್ಮಿಕರಿಗೆ ಹಲ್ಲೆ ಪ್ರಕರಣ: ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ABOUT THE AUTHOR

...view details