ಮೈಸೂರು: ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಚಲೋ ನಡೆಸುತ್ತಿರುವ ರೈತರನ್ನು ಕೇಂದ್ರ ಸರ್ಕಾರ ತಡೆಯುವ ಮೂಲಕ ರೈತರಿಗೆ ಅನ್ಯಾಯ ಮಾಡ್ತಿದೆ ಎಂದು ರೈತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ನವೆಂಬರ್ 26 ಮತ್ತು 27 ರಂದು ದೆಹಲಿ ಚಲೋ ಹೋರಾಟಕ್ಕೆ ಹೊರಟಿದ್ದ ಲಕ್ಷಾಂತರ ರೈತರು, ಕೃಷಿ ಕೂಲಿಕಾರರ ಮೇಲೆ ಲಾಠಿ ಚಾರ್ಜ್, ಜಲಫಿರಂಗಿ ದಾಳಿ ಮಾಡಿ ಪೊಲೀಸರು ದೌರ್ಜನ್ಯವೆಸಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೃಷಿಕರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಕಿಡಿಕಾರಿದರು.