ಮೈಸೂರು:ಕಬಿನಿ ಹಾಗೂ ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ರಾಜ್ಯದ ಕಬ್ಬು ಬೆಳೆಗಾರರ ಸಂಘವು ರಾಷ್ಟ್ರೀಯ ಹೆದ್ದಾರಿಯನ್ನು 1 ಗಂಟೆಗೂ ಹೆಚ್ಚು ಕಾಲ ತಡೆದು ಪ್ರತಿಭಟನೆ ನಡೆಸಿದೆ.
ಕಬಿನಿ ಹಾಗೂ ಕೆ.ಆರ್.ಎಸ್ ಜಲಾಶಯಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗದಿದ್ದರು ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ, ವರ್ತಕರ ಸಂಘ ಹಾಗೂ ರೈತ ಪರ ಸಂಘಟನೆಯವರು ಟಿ.ನರಸೀಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 212 ರಲ್ಲಿ 1 ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.