ಮೈಸೂರು: ಜಿಲ್ಲೆಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ - ವಿವಿಧ ಬೇಡಿಕೆಗಳ ಈಡೇರಿಕೆ ಪ್ರತಿಭಟನೆ
ಮೈಸೂರು ಕಬ್ಬು ಬೆಳೆಗಾರರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ಕಬ್ಬು ಬೆಳೆಗಾರರ ಸಂಘದ ಮನವಿಯನ್ನು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸ್ವೀಕರಿಸಬೇಕೆಂದು ರೈತರು ಪಟ್ಟು ಹಿಡಿದರು. ಸ್ಥಳಕ್ಕೆ ಜಿಲ್ಲಾಧಿಕಾರಿಗಳ ಬದಲಾಗಿ ಅಪರ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಮುಂದಾದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ರೈತರು ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿಗೆ ಮನವಿ ಸಲ್ಲಿಸಿ, ತಮ್ಮ ಬೇಡಿಕೆ ಈಡೇರಿಸವಂತೆ ಒತ್ತಾಯಿಸಿದರು.