ಮೈಸೂರು: ಕೋವಿಡ್ ಪರೀಕ್ಷೆಯ ವರದಿ ಪಾಸಿಟಿವ್ ಬಂದ ಕಾರಣ ಶಿಕ್ಷಕನೋರ್ವ ಹೆದರಿ ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ನಗರ ತಾಲೂಕಿನ ಕೋಗಿಲೂರು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಕೋಗಿಲೂರು ಗ್ರಾಮದ ಕೆ. ಎನ್. ಲೋಕೇಶ್ (30) ಮೃತ ಶಿಕ್ಷಕ. ಲೋಕೇಶ್ ಅವರ ಶವ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೇರಳಾಪುರದ ಕಾವೇರಿ ನದಿಯಲ್ಲಿ ದೊರಕಿದೆ. ಕಳೆದ ಎರಡು ದಿನಗಳ ಹಿಂದೆ ತಲೆ ನೋವು ಕಾಣಿಸಿಕೊಂಡ ಕಾರಣ ಕೆ.ಆರ್. ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಲೋಕೇಶ್ ಪರೀಕ್ಷೆ ಮಾಡಿಸಿದ್ದರು. ಪರೀಕ್ಷೆಯ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿತ್ತು. ಇದರಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದರು.