ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ್ದು, ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಹುಡುಗಿಯನ್ನ ರೇಗಿಸಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ - kannadanews
ಯುವತಿಯನ್ನು ರೇಗಿಸಿದ ಕಾರಣಕ್ಕಾಗಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಖಾಲಿ ಜಾಗದಲ್ಲಿ ಹುಡುಗರು ಕ್ರಿಕೆಟ್ ಆಡುವಾಗ ಕಾಲೇಜಿನಿಂದ ಬರುವ ಯುವತಿಯರ ಎದುರು ಅಸಭ್ಯವಾಗಿ ವರ್ತಿಸುತಿದ್ದರು ಎಂದು ಆರೋಪಿಸಲಾಗಿದೆ. ಇದರ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಈ ಗುಂಪಿನ ಹುಡುಗರು ಮತ್ತೊಂದು ಗುಂಪಿನ ಯುವಕರಿಗೆ ಅವಾಜ್ ಹಾಕಿ ಕಳುಹಿಸಿದ್ದಾರೆ. ನಂತರ ಕ್ರಿಕೆಟ್ ಆಡುತ್ತಿದ್ದ ಗುಂಪಿನ ಹುಡುಗರು ನಿನ್ನೆ ರಾತ್ರಿ ಯುವತಿಯ ಮನೆಗೆ ನುಗ್ಗಿ ಮನೆಯಲ್ಲಿದ್ದರ ಮೇಲೆ ಬ್ಯಾಟ್ ಹಾಗೂ ದೊಣ್ಣೆಯಿಂದ ಹೊಡೆದು ಪರಾರಿಯಾಗಿದ್ದಾರೆ. ಪರಿಣಾಮವಾಗಿ ಯುವತಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ ಯುವಕರ ಮೇಲೆ ಪ್ರತಿ ಹಲ್ಲೆ ಮಾಡಲಾಗಿದೆ.
ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಗ್ರಾಮಕ್ಕೆ ಬಂದು ಮನವೊಲಿಸಲು ಮುಂದಾಗಿದ್ದಾರೆ. ಆದರೆ ಯುವಕರು ತಡರಾತ್ರಿಯವರೆಗೆ ಪ್ರತಿಭಟನೆ ನಡೆಸಿದ ಪರಿಣಾಮ ಹಲ್ಲೆ ಮಾಡಿದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯುವತಿಯ ಕುಟುಂಬಸ್ಥರು ನಂಜನಗೂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.