ಮೈಸೂರು:'ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ' ಎಂಬ ವಿಡಿಯೋ, ಆಡಿಯೋ ಪ್ರಕರಣ ಸಂಬಂಧ ನಂಜನಗೂಡಿನ ಬಿಜೆಪಿ ಕಾರ್ಯಕರ್ತರು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಂಜನಗೂಡು ದೊಡ್ಡಕವಲಂದೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಈಗಾಗಲೇ ಈ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ಸಿಎಂ, ಮೈಸೂರು ಎಸ್ಪಿ ಜೊತೆ ಮಾತುಕತೆ ನಡೆಸುತ್ತೇನೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ನಂಜನಗೂಡು ತಾಲೂಕಿನ ದೊಡ್ಡಕವಲಂದೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ರಸ್ತೆಯಲ್ಲಿ ನೂರಾರು ಜನರಿದ್ದ ಗುಂಪೊಂದು ಮನೆಗೆ ತೆರಳುತ್ತಿ ವೇಳೆ ಸೆರೆಯಾದ ವಿಡಿಯೋ ಇದಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ ಎಂದು ಹೇಳಿರುವ ಧ್ವನಿ ವಿಡಿಯೋದಲ್ಲಿ ಕೇಳಿ ಬರುತ್ತದೆ.