ಮೈಸೂರು:ಮತಗಟ್ಟೆ ಬಳಿ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ ಶಾಸಕ ಹಾಗೂ ಅನುಚಿತವಾಗಿ ವರ್ತಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಬಿಳಿಕರೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಎಫ್ಐಆರ್ ದಾಖಲು ನಿನ್ನೆ ಹುಣಸೂರು ಕ್ಷೇತ್ರದ ಉಪ ಚುನಾವಣೆಯ ಮತದಾನದ ಸಂದರ್ಭದಲ್ಲಿ ಈ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಹೊಸರಾಮೇನಹಳ್ಳಿ ಸ್ವಗ್ರಾಮಕ್ಕೆ ಮತಚಲಾಯಿಸಲು ಆಗಮಿಸಿದ್ದ ಹೆಚ್.ಡಿ ಕೋಟೆಯ ಶಾಸಕ ಅನಿಲ್ ಚಿಕ್ಕಮಾದು ಅವರ ಜೊತೆ ಗುಂಪಾಗಿ ಬಂದ ಜನರನ್ನು ಕಂಡ ಇನ್ಸ್‌ಪೆಕ್ಟರ್ ಸುನೀಲ್ ಕುಮಾರ್ ದಯವಿಟ್ಟು ಗುಂಪಾಗಿ ಹೋಗಬೇಡಿ ಎಂದು ಹೇಳಿದಾಗ ಸಿಟ್ಟಿಗೆದ್ದ ಶಾಸಕ ಹಾಗೂ ಅವರ ಬೆಂಬಲಿಗರು ಮತಗಟ್ಟೆ ಒಳಗೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಹತೋಟಿಗೆ ತಂದು ರಾಜಿ ಸಂಧಾನಕ್ಕೆ ಮುಂದಾದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಸುಂದರ್ ರಾಜ್ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಅವರನ್ನು ಮನವೊಲಿಸಲು ಯತ್ನಿಸಿದಾಗ ಅವರು ಡಿವೈಎಸ್ಪಿ ವಿರುದ್ಧ ಏಕವಚನದಲ್ಲೇ ಹರಿಹಾಯ್ದದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಸ್ನೇಹ ಸಂಧಾನ ಮಾಡಿ ಕೊನೆಗೆ 3 ಗಂಟೆ ನಂತರ ಪರಿಸ್ಥಿತಿ ತಿಳಿಯಾಯಿತು.
ದೂರು ದಾಖಲು
ಮತಗಟ್ಟೆಯ ಸಮೀಪ ಗುಂಪು ಸೇರಿಸಿಕೊಂಡು ಪೊಲೀಸರೊಂದಿಗೆ ಜಟಾಪಟಿ ನಡೆಸಿದ ಶಾಸಕ ಚಿಕ್ಕಮಾದು ಹಾಗೂ ಪೊಲೀಸ್ ಅಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ವಿರುದ್ಧ ಬಿಳಿಕರೆ ಠಾಣೆಯಲ್ಲಿ ಭಾರತೀಯ ಬಂಧಸಹಿಷ್ಣುತೆ 143,147,353, ಹಾಗೂ 149ರ ಅಡಿಯಲ್ಲಿ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ದೂರು ದಾಖಲಾಗಿದೆ.