ಮೈಸೂರು:ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನ ಗನ್ ಹೌಸ್ ಬಳಿ ನಡೆದಿದೆ. ಕಾರಿನಲ್ಲಿದ್ದ ವೈದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರಿನ ಕುವೆಂಪು ನಗರದ ನಿವಾಸಿಯಾದ ವೈದ್ಯ ಭೂಷಣ್ ಅವರು ಬೆಳಗ್ಗೆ ತಮ್ಮ ಕಾರಿನಲ್ಲಿ ಕೆ.ಆರ್. ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡಿದಿದೆ. ತಕ್ಷಣ ಅವರು ಕಾರಿನಿಂದಿಳಿದು ನೋಡಿದಾಗ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಹೋಗಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.