ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹಣ್ಣು-ತರಕಾರಿ, ಹೂ,ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದರೂ ಭರ್ಜರಿಯಾಗಿಯೇ ಪದಾರ್ಥಗಳನ್ನು ಕೊಳ್ಳಲು ಗ್ರಾಹಕರು ಮುಗಿಬಿದ್ದಿದ್ದಾರೆ.
ಸಾಂಸ್ಕೃತಿಕ ನಗರಿಯಲ್ಲಿ ಗೌರಿ–ಗಣೇಶ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದ್ದು,ಹಬ್ಬದ ಮುನ್ನಾ ದಿನವೇ ಗಗನಕ್ಕೇರಿದ ಹೂವಿನ ಬೆಲೆ ಗಗನಕ್ಕೇರಿದ್ದು, ಬೆಲೆ ಏರಿಕೆಯ ನಡುವೆಯೂ ಗೌರಿ ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರಾಗಿದೆ.
ಪೂಜಾ ಸಾಮಗ್ರಿ, ಗಣೇಶ ಮೂರ್ತಿ ಖರೀದಿಸಲು ನಗರದ ದೇವರಾಜ ಮಾರುಕಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಆಗಮಿಸುತ್ತಿದ್ದಾರೆ. ವಸ್ತುಗಳ ಬೆಲೆ ಏರಿಕೆ ನಡುವೆಯೂ ವಹಿವಾಟು ಕುಂದಿಲ್ಲ. ರಸ್ತೆಗಳ ಬದಿಯಲ್ಲಿ ಪಾದಚಾರಿ ಮಾರ್ಗದಲ್ಲಿ ಹೂವು, ಹಣ್ಣು, ಬಾಳೆಕಂದು, ತುಳಸಿ, ಮಾವಿನ ಸೊಪ್ಪು, ಮೊರ ಮಾರಾಟ ಬಲು ಜೋರಾಗಿದೆ.
ಗಗನಕ್ಕೇರಿದ ಹೂವಿನ ಬೆಲೆ