ಕರ್ನಾಟಕ

karnataka

ಕೋವಿಡ್​​ನಿಂದ ರಕ್ಷಿಸಿಕೊಳ್ಳಲು ಸುರಕ್ಷತಾ ಕ್ರಮಗಳನ್ನು ಅನುಸರಿಸಿ.. ವೈದ್ಯರ ಸಲಹೆ

By

Published : Oct 6, 2020, 5:00 PM IST

ಆರೋಗ್ಯ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವ ಮುನ್ನ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಆಗ ರೋಗವನ್ನು ಮತ್ತೊಬ್ಬರಿಗೆ ಹರಡದಂತೆ ತಡೆಯಬಹುದು..

Follow security measures to protect covid
ಕೆ.ಆರ್.ಆಸ್ಪತ್ರೆಯ ಮುಖ್ಯಸ್ಥ ರಾಜೇಶ್ ಕುಮಾರ್

ಮೈಸೂರು: ಕೋವಿಡ್​​​-19ನಿಂದ ರಕ್ಷಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಎಂದು ಕೆ ಆರ್ ಆಸ್ಪತ್ರೆಯ ಮುಖ್ಯಸ್ಥ ಮತ್ತು ವೈದ್ಯ ರಾಜೇಶ್‌ಕುಮಾರ್ ತಿಳಿಸಿದ್ದಾರೆ‌.

ಜಿಲ್ಲೆಯಲ್ಲಿ ನಿತ್ಯ ಕೋವಿಡ್ ಪ್ರಕರಣಗಳ ಜೊತೆಗೆ ಸಾವಿನ ಸಂಖ್ಯೆಯೂ ಅಧಿಕವಾಗುತ್ತಿದೆ. ಅನ್​ಲಾಕ್ ಸಂದರ್ಭದಲ್ಲಿ ಜನರು ನಗರದ ಬಸ್ ನಿಲ್ದಾಣ, ದೇವರಾಜ ಮಾರುಕಟ್ಟೆ, ರೈಲ್ವೆ ನಿಲ್ದಾಣ ಸೇರಿ ಪ್ರಮುಖ ಸ್ಥಳಗಳಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಮರೆತು ಓಡಾಟ ನಡೆಸುತ್ತಿರುವುದು ಕಂಡು ಬರುತ್ತಿದೆ. ಕೊರೊನಾ ವಿಷಯದಲ್ಲಿ ನಿರ್ಲಕ್ಷ್ಯವಹಿಸುವುದು ಬೇಡ ಎಂದು ಸಲಹೆ ನೀಡಿದ್ದಾರೆ.

ಕೆ ಆರ್ ಆಸ್ಪತ್ರೆಯ ಮುಖ್ಯಸ್ಥ ರಾಜೇಶ್‌ಕುಮಾರ್

ಆರೋಗ್ಯ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವ ಮುನ್ನ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಆಗ ರೋಗವನ್ನು ಮತ್ತೊಬ್ಬರಿಗೆ ಹರಡದಂತೆ ತಡೆಯಬಹುದು.

ಸಾರ್ವಜನಿಕ ಸಾರಿಗೆ ಉಪಯೋಗಿಸಿದ್ರೆ, ತಕ್ಷಣ ಕೈ ತೊಳೆದುಕೊಳ್ಳಬೇಕು. ಧರಿಸಿದ ಬಟ್ಟೆಗಳನ್ನು ಸ್ವಚ್ಛಗೊಳಿಸಿ ನಂತರ ಸ್ನಾನ ಮಾಡಬೇಕು ಎನ್ನುತ್ತಾರೆ ರಾಜೇಶ್‌ಕುಮಾರ್.

ABOUT THE AUTHOR

...view details