ಕರ್ನಾಟಕ

karnataka

ETV Bharat / state

ಮಮತಾ ಬ್ಯಾನರ್ಜಿ ಭೇಟಿ ವೇಳೆ ತೃತೀಯ ರಂಗ ಕುರಿತು ಚರ್ಚೆ ಮಾಡಿಲ್ಲ: ಹೆಚ್​ಡಿಕೆ - ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

ಚಾಮುಂಡಿಬೆಟ್ಟದ ಪಕ್ಕದ ಉತ್ತನಹಳ್ಳಿಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ ಸಮಾರೋಪ ಸಮಾರಂಭ ಆಯೋಜನೆ. ಪಂಚರತ್ನ ಯಾತ್ರೆ ಸಮಾರೋಪದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾಹಿತಿ.

Former CM Kumaraswamy spoke to reporters.
ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು.

By

Published : Mar 25, 2023, 9:45 PM IST

ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೈಸೂರು: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಆಗಿ, ಮುಂದಿನ ಲೊಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ಸೇರಿ ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮಾಡುವುದು ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಆದರೆ ತೃತೀಯ ರಂಗದ ರಚನೆಯ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಾಳೆ ಮೈಸೂರಿನ ಚಾಮುಂಡಿ ಬೆಟ್ಟದ ಪಕ್ಕದಲ್ಲಿರುವ ಉತ್ತನಹಳ್ಳಿಯಲ್ಲಿ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ಜರುಗಲಿರುವ ಹಿನ್ನೆಲೆ ಶನಿವಾರ ಕುಮಾರಸ್ವಾಮಿ ಹಾಗೂ ಶಾಸಕ ಜಿ ಟಿ.ದೇವೆಗೌಡ ವೇದಿಕೆ ನಿರ್ಮಾಣದ ಸ್ಥಳ ಪರಿಶೀಲಿಸಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

ಪಂಚರತ್ನ ಸಮಾರೋಪದಲ್ಲಿ ದೇವೇಗೌಡರು ಭಾಗಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಹಾಗೂ ಇತರ ಯಾವುದೇ ರಾಜ್ಯದ ನಾಯಕರನ್ನು ಪಂಚರತ್ನ ಸಮಾರೋಪ ಸಮಾರಂಭಕ್ಕೆ ಆಹ್ವಾನ ನೀಡಿಲ್ಲ. ದೇವೇಗೌಡರು ಪ್ರಮುಖ ಆಕರ್ಷಣೆ ಆಗಲಿದ್ದು, ಅವರು ಕಳೆದ ಆರೇಳು ತಿಂಗಳಿನಿಂದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ನಾಳೆ ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು ಎಂದು ಹೆಚ್​ಡಿಕೆ ಮಾಹಿತಿ ನೀಡಿದರು.

ಚಾಮುಂಡೇಶ್ವರಿ ಸನ್ನಿಧಿಗೆ ಪೂಜೆ ಮಾಡಿ ಪ್ರಚಾರ: ನಾಳೆಯಿಂದ ಚುನಾವಣೆ ಪ್ರಚಾರ ಆರಂಭವಾಗಲಿದೆ. ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ 123ರ ಗುರಿ ದಾಟಲು ಆಶೀರ್ವಾದ ಪಡೆದು ಪಂಚರತ್ನ ಸಮಾರೋಪ ನಡೆಯಲಿದೆ. ಸುಮಾರು 10 ಲಕ್ಷ ಜನರು ಸಮಾರೋಪದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ಪಂಚರತ್ನದಲ್ಲಿ ಅಭಿಮಾನಿಗಳು ಹಾಕಿದ ವಿವಿಧ ರೀತಿಯ ಹಾರಗಳು ಗಿನ್ನಿಸ್ ದಾಖಲೆ ಸೇರಿವೆ. ಅದೇ ರೀತಿ ನಾಳಿನ ಸಮಾರೋಪ ಕಾರ್ಯಕ್ರಮವು ಗಿನ್ನಿಸ್ ದಾಖಲೆ ಬರೆಯಲಿದೆ ಎಂದು ಮಾಜಿ ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ತೃತೀಯ ರಂಗದ ರಚನೆ ಬಗ್ಗೆ ಚರ್ಚೆ ಆಗಿಲ್ಲ: ಮಮತಾ ಬ್ಯಾನರ್ಜಿಯವರ ಭೇಟಿ ವೇಳೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಒಟ್ಟಾಗಿ ರಾಷ್ಟ್ರೀಯ ಪಕ್ಷಗಳ ವಿರುದ್ಧ ಮಾಡಲು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಆದರೆ ತೃತೀಯ ರಂಗದ ರಚನೆಯ ಬಗ್ಗೆ ಸದ್ಯಕ್ಕೆ ಚರ್ಚೆಯಾಗಿಲ್ಲ. ಮುಂದೆ ಆ ಬಗ್ಗೆ ಚರ್ಚೆ ಮಾಡುತ್ತೇವೆ. ಸದ್ಯಕ್ಕೆ ಸಮಾರೋಪ ಸಮಾರಂಭದ ಬಗ್ಗೆ ನಾನು ಬ್ಯುಸಿಯಾಗಿದ್ದು, ಇದಾದ ನಂತರ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.

ಮೈಸೂರಿನ ಎನ್ ಆರ್.ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಸ್ಪರ್ಧೆ ಮಾಡುವಂತೆ ಕೆಲವರು ಇಷ್ಟಪಟ್ಟಿದ್ದಾರೆ. ಆ ಬಗ್ಗೆ ಒಟ್ಟಾಗಿ ಕುಳಿತು ಚರ್ಚೆ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ತಿಳಿಸಿದರು.

ಗಿನ್ನಿಸ್ ದಾಖಲೆಯ ಪಂಚರತ್ನ ಯಾತ್ರೆ: ಕಳೆದ ನವಂಬರ್ 1 ರಂದು ಕೋಲಾರ ಜಿಲ್ಲೆಯ ಮುಳಬಾಗಿಲಿನ ದೇವಾಲಯದಿಂದ ಪೂಜೆ ಸಲ್ಲಿಸಿ ಆರಂಭವಾದ ಪಂಚರತ್ನ ರಥಯಾತ್ರೆ 116 ದಿನಗಳನ್ನು ಪೂರೈಸಿದೆ. ನೂರಕ್ಕೂ ಹೆಚ್ಚು ವಿಧಾನ ಸಭಾ ಕ್ಷೇತ್ರಗಳಲ್ಲಿ ಪಂಚರತ್ನ ಯಾತ್ರೆ ಸಂಚಾರ ಮಾಡಿದ್ದು, ನೂರಕ್ಕೂ ಹೆಚ್ಚು ವಿವಿಧ ಬಗೆಯ ಬೃಹತ್ ಹಾರಗಳಿಂದ ದಾಖಲೆ ಬರೆದಿದೆ. ನಾಳೆ ನಡೆಯಲಿರುವ ಪಂಚರತ್ನ ರಥಯಾತ್ರೆ ಕಾರ್ಯಕ್ರಮದಲ್ಲಿ ಬೃಹತ್ ವೇದಿಕೆ ಹಾಗೂ 10 ಲಕ್ಷ ಜನ ಸೇರುವ ಪೆಂಡಾಲ್​ನ್ನು ನೂರು ಎಕರೆಯಲ್ಲಿ ನಿರ್ಮಾಣ ಮಾಡಲಾಗಿದೆ. ಪಂಚರತ್ನ ರಥಯಾತ್ರೆಯ ಸಮಾರೋಪವೂ ಸಹ ಗಿನ್ನಿಸ್ ದಾಖಲೆ ಸೇರಲಿದೆ ಎಂದು ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಡಬಲ್ ಇಂಜಿನ್ ಸರ್ಕಾರವನ್ನು ಮರಳಿ ತರಲು ಕರ್ನಾಟಕ ನಿರ್ಧರಿಸಿದೆ: ಪ್ರಧಾನಿ ಮೋದಿ

ABOUT THE AUTHOR

...view details