ಕರ್ನಾಟಕ

karnataka

ETV Bharat / state

ಜಿ.ಟಿ. ದೇವೇಗೌಡರಿಗೆ ಜೆಡಿಎಸ್ ಮನೆ ಬಾಗಿಲು ಮುಚ್ಚಿದೆ: ಕುಮಾರಸ್ವಾಮಿ

ಶಾಸಕ ಜಿ.ಟಿ. ದೇವೇಗೌಡರಿಗೆ ಜೆಡಿಎಸ್ ಮನೆಬಾಗಿಲು ಮುಚ್ಚಿದ್ದು, ಇದರಲ್ಲಿ ಕಾರ್ಯಕರ್ತರಿಗೆ ಯಾವುದೇ ಅನುಮಾನ ಬೇಡ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೊಸ ನಾಯಕತ್ವ ನೀಡಲಾಗುವುದು ಎಂದು ಹೆಚ್​​ಡಿಕೆ ಸ್ಪಷ್ಟನೆ ನೀಡಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ

By

Published : Dec 4, 2021, 7:44 PM IST

ಮೈಸೂರು:ಶಾಸಕ ‌ಜಿ.ಟಿ. ದೇವೇಗೌಡರಿಗೆ ಜೆಡಿಎಸ್ ಮನೆ ಬಾಗಿಲು ಮುಚ್ಚಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಮೈಸೂರು ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಶಾಸಕ ಜಿ.ಟಿ. ದೇವೇಗೌಡರಿಗೆ ಜೆಡಿಎಸ್ ಮನೆಬಾಗಿಲು ಮುಚ್ಚಿದ್ದು, ಇದರಲ್ಲಿ ಕಾರ್ಯಕರ್ತರಿಗೆ ಯಾವುದೇ ಅನುಮಾನ ಬೇಡ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೊಸ ನಾಯಕತ್ವ ನೀಡಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ

ಪ್ರಚಾರ ಸಭೆಗೆ ಹೋಗದಂತೆ ‌ನಾಯಕರೊಬ್ಬರು ಧಮ್ಕಿ ಹಾಕಿದ್ದಾರೆ. ಆದರೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜನರು ಪ್ರೀತಿ ವಿಶ್ವಾಸಕ್ಕೆ ತಲೆಬಾಗುತ್ತಾರೆಯೇ ಹೊರತು ಧಮ್ಕಿ ಹಾಕಿದರೆ ಅಲ್ಲ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ಇತ್ತು. ಆದರೂ ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ನಾನು ಮುಖ್ಯಮಂತ್ರಿ ‌ಆದೆ. ಸಿಎಂ ಆದ ಮೇಲೆ ಇನ್ನಿಲ್ಲದ ತೊಂದರೆ ಕೊಟ್ಟರೂ 25 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದೆ ಎಂದು ಸಮ್ಮಿಶ್ರ ಸರ್ಕಾರದ ಕುರಿತು ಹೆಚ್​ಡಿಕೆ ಮಾತನಾಡಿದರು.‌

ನಮ್ಮ ಟಾರ್ಗೆಟ್ 123:

ನಮ್ಮ ಮುಂದಿನ ಗುರಿ 2023 ರ ಚುನಾವಣೆಯಲ್ಲಿ 123 ಟಾರ್ಗೆಟ್ ಆಗಿದೆ. ಈ ಗುರಿ‌ ಮುಟ್ಟಿ ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಸ್ಥಳೀಯ ಸಂಸ್ಥೆ ಬಲಪಡಿಸಲು ಮಾಜಿ‌ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಲವು ಕಾರ್ಯಕ್ರಮ ನೀಡಿದ್ದಾರೆ. ಇದನ್ನರಿತು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಪಂಚ ಕಾರ್ಯಕ್ರಮ ಅನುಷ್ಠಾನಕ್ಕೆ ಜೆಡಿಎಸ್​​ನ್ನು ಅಧಿಕಾರಕ್ಕೆ ತನ್ನಿ:

ಗ್ರಾಮೀಣ ಪ್ರದೇಶದ ಜನರಿಗೆ ಉಚಿತ ಆರೋಗ್ಯ, ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡುವುದು ನಮ್ಮ ಗುರಿ. ಪ್ರತಿ ಕುಟುಂಬಕ್ಕೆ ಉದ್ಯೋಗ ಮತ್ತು ಮನೆ ನೀಡುವುದು ಕೂಡ ನಮ್ಮ ಯೋಜನೆ. ಜನವರಿ ತಿಂಗಳಿನಿಂದ ಈ ಎಲ್ಲಾ ಯೋಜನೆಯ ಬಗ್ಗೆ ಜನತೆಗೆ ವಿವರ ನೀಡಲಾಗುವುದು. ನಾನು ನೀಡಬೇಕಿರುವ ಪಂಚ ಕಾರ್ಯಕ್ರಮ ಅನುಷ್ಠಾನಕ್ಕೆ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.

For All Latest Updates

TAGGED:

ABOUT THE AUTHOR

...view details