ಮೈಸೂರು: ದಸರಾ ಉದ್ಘಾಟನೆಗೆ ಆಗಮಿಸಿದ ಎಸ್. ಎಂ ಕೃಷ್ಣ ಅವರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.
ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ ಸೋಮಶೇಖರ್ ಅವರು ಕೊಲಂಬಿಯಾ ಏಷಿಯಾ ರಸ್ತೆಯ ಸಿಗ್ನಲ್ ಬಳಿ ಸಾಂಪ್ರದಾಯಿಕವಾಗಿ ಸ್ವಾಗತವನ್ನು ಕೋರಿ ಬರಮಾಡಿಕೊಂಡರು.

ನಾಳೆ ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 8.15 ರಿಂದ 8.45 ರ ಶುಭ ಲಗ್ನದಲ್ಲಿ ನಾಡಹಬ್ಬ ದಸರಾಗೆ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಎಸ್.ಎಂ ಕೃಷ್ಣ ಅವರು ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು ನಗರದ ಖಾಸಗಿ ಹೋಟೆಲ್ನಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಲಿದ್ದಾರೆ.
ಓದಿ:ನಾಳೆಯಿಂದ ನಾಡಹಬ್ಬ.. ದಸರಾದಲ್ಲಿ ಏನೇನು ವಿಶೇಷ.. ಇಲ್ಲಿದೆ ಸಂಪೂರ್ಣ ಮಾಹಿತಿ