ಮೈಸೂರು:ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ತೆರಳುವಾಗ ಕಾಂಗ್ರೆಸ್ ಕಾರ್ಯಕರ್ತನೊರ್ವನ ಕೆನ್ನೆಗೆ ಹೊಡೆದು ಹೋಗುವ ದೃಶ್ಯವನ್ನು ಎಲ್ಲ ಮಾಧ್ಯಮಗಳು ಬಿತ್ತರ ಮಾಡಿದ್ದವು. ಇದೀಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
'ಕೈ'ಕಾರ್ಯಕರ್ತನ ಕೆನ್ನೆಗೆ ಬಾರಿಸಿರುವುದಕ್ಕೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ತೆರಳುವಾಗ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಕೆನ್ನೆಗೆ ಬಾರಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದಕ್ಕೆ ಇದೀಗ ಸ್ಪಷ್ಟನೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನನಗೆ ಪುತ್ರನ ಸಮಾನನಾದ ನಂದನಹಳ್ಳಿ ರವಿ ನಾನು ಬೆಳೆಸಿದ ಯುವನಾಯಕ, ಇಂತಹ ನೂರಾರು ಯುವಕರು ನನ್ನ ಜತೆ ಇರ್ತಾರೆ. ಅವರ ಜೊತೆ ಪ್ರೀತಿ-ಕೋಪದಿಂದ ಇರುವ ಸಂಬಂಧ ನನ್ನದು. ಅವನಿಗೆ ಹುಸಿ ಕೋಪದಿಂದ ಕೆನ್ನೆಗೆ ಹೊಡೆದಿದ್ದೆ. ಅದಕ್ಕೆ ವಿಪರೀತವಾಗಿ ಬೇರೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ರವಿಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾನೆ’ ಎಂದಿದ್ದಾರೆ.
Last Updated : Sep 5, 2019, 4:30 PM IST