ಕರ್ನಾಟಕ

karnataka

ETV Bharat / state

ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಗ್ಯಾರಂಟಿ ಅಂತಾ ಕಾಣುತ್ತೆ:  ಸಾ.ರಾ.ಮಹೇಶ್ ಭವಿಷ್ಯ - ಮಾಜಿ ಸಚಿವ

ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆದ ನಂತರದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಅನಿಸುತ್ತದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಮೈಸೂರಿನ ಪತ್ರಿಕಾ ಭವನದಲ್ಲಿ ಹೇಳಿಕೆ ನೀಡಿದ್ದಾರೆ.

ಪತ್ರಿಕಾ ಭವನ

By

Published : Aug 21, 2019, 2:23 PM IST

ಮೈಸೂರು: ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆದ ನಂತರದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಅನಿಸುತ್ತದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಪತ್ರಿಕಾ ಭವನದಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಇಲ್ಲಿನ ಭಾಗಕ್ಕೆ ಒಂದೇ ಒಂದು ಸಚಿವ ಸ್ಥಾನವನ್ನು ನೀಡಿಲ್ಲ, ಹಾಗಾಗಿ ಅತೃಪ್ತ ಪ್ರೇತಾತ್ಮಗಳಿಗೆ ಮಂತ್ರಿ ಸ್ಥಾನ ನೀಡಲು ಮೀಸಲು ಇಟ್ಟಿದ್ದೀರಾ ಎಂದು ವಾಗ್ದಾಳಿ ನಡೆಸಿದರು.

ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಅನಿಸುತ್ತದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಮೈಸೂರಿನ ಪತ್ರಿಕಾ ಭವನದಲ್ಲಿ ಹೇಳಿಕೆ ನೀಡಿದ್ದಾರೆ

ಇಂದಿನ ಬಿಜೆಪಿ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಬಂದಿದೆ. ಇಂತಹ ಸಂದರ್ಭಗಳಲ್ಲಿ ಕಳೆದ 26 ದಿನಗಳಲ್ಲಿ ರಾಜ್ಯ ಸರ್ಕಾರ ಜನರ ಸಂಕಷ್ಟಕ್ಕೆ‌ ಸ್ಪಂದಿಸದೇ ಈ 26 ದಿನಗಳಲ್ಲಿ ಮಂತ್ರಿ ಮಂಡಲ ಇಲ್ಲದೇ 600 ಜನ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ದಾಖಲೆ ಮಾಡಿದೆ ಎಂದು ವ್ಯಂಗ್ಯವಾಡಿದರು. ಜಿ.ಟಿ ದೇವೇಗೌಡ ಅವರು ಬಿಜೆಪಿಗೆ ಹೋಗುವುದಿಲ್ಲ ಅವರಿಗೆ ಆರೋಗ್ಯ ಸರಿಯಿಲ್ಲ ಸರಿಯಾದ ನಂತರ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು.

ಇನ್ನೂ ವಿಶ್ವನಾಥ್ ಆಣೆ ಪ್ರಮಾಣದ ಬಗ್ಗೆ ನಾನು ನನ್ನ ಹೇಳಿಕೆಗೆ ಈಗಲೂ ಬದ್ದ. ಆದರೆ ಅವರು ಸ್ಥಳ ನಿಗದಿ ಮಾಡಲಿ. ಅಲ್ಲಿಗೆ ನಾನು ಬರುತ್ತೇನೆ ಎಂದು ಸವಾಲು ಪುನರುಚ್ಛರಿಸಿದರು.

ABOUT THE AUTHOR

...view details