ಮೈಸೂರು:ಅಧಿವೇಶನದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ಎಂದು ಪ್ರಗತಿಪರರು ಮಾಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.
ನಾಗಮೋಹನ್ ದಾಸ್ ವರದಿ ಜಾರಿಗೆ ಒತ್ತಾಯಿಸಿ: ಸಿದ್ದರಾಮಯ್ಯಗೆ ಪ್ರಗತಿಪರರ ಮನವಿ - ಅಧಿವೇಶನದಲ್ಲಿ ನಾಗಮೋಹನ್ ದಾಸ್ ವರದಿಗೆ ಒತ್ತಾಯ
ಇಂದು ಮಾಜಿ ಸಂಸದ ಆರ್.ಧ್ರುವನಾರಾಯಣ ಸೇರಿದಂತೆ ವಿವಿಧ ಪ್ರಗತಿಪರರು ನಗರದಲ್ಲಿ ಸಭೆ ನಡೆಸಿದರು. ಈ ವೇಳೆ, ಅಧಿವೇಶನದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯ ಜಾರಿ ಮಾಡುವಂತೆ ಒತ್ತಾಯಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಪ್ರಗತಿಪರವಾದ ಪ್ರೊ.ಮಹೇಶ್ಚಂದ್ರಗುರು, ರಂಗಾಯಣ ಮಾಜಿ ನಿರ್ದೇಶಕ ಜನಾರ್ದನ್ (ಜೆನ್ನಿ), ಗೋಪಾಲಕೃಷ್ಣ, ಡಾ.ಕೃಷ್ಣಮೂರ್ತಿ ಚಮ್ಮಾರ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಸೇರಿದಂತೆ ಹಲವರು ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ, ನಾಗಮೋಹನ್ ದಾಸ್ ವರದಿಯನ್ನು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಎಂದು ಕೋರಿಕೊಂಡರು.
ಸಭೆ ನಂತರ ಮಾಧ್ಯಮಗಳೊಂದಿಗೆ ಮಾಜಿ ಸಂಸದ ಆರ್.ಧ್ರುವನಾರಾಯಣ ಮಾತನಾಡಿ, ಪರಿಶಿಷ್ಟ ಜಾತಿ ಮೀಸಲಾತಿ ಹೆಚ್ಚಳ ಮಾಡುವಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ವರದಿ ನೀಡಿದ್ದಾರೆ.ಈ ವರದಿ ಜಾರಿಗೆ ಅಧಿವೇಶನದಲ್ಲಿ ಒತ್ತಾಯಿಸಿ ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ ಎಂದರು.