ಮೈಸೂರು:ಹದಗೆಟ್ಟ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಮೈಸೂರಿನ ರಾಷ್ಟ್ರೀಯ ಹೆದ್ದಾರಿ ಉಪ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ.
ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರ ಪ್ರತಿಭಟನೆ - kannadanews
ಹದಗೆಟ್ಟ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಮೈಸೂರಿನ ರಾಷ್ಟ್ರೀಯ ಹೆದ್ದಾರಿ ಉಪ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ.
ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರ ಪ್ರತಿಭಟನೆ
ಕೆ.ಆರ್.ಸಾಗರಕಟ್ಟೆ ರೈಲ್ವೆ ನಿಲ್ದಾಣದಿಂದ ಸಾಗರಕಟ್ಟೆಯವರೆಗೆ ಇರುವ ಟರ್ಕಿ ಟ್ರಾವೆಲ್ಸ್ ರೋಡ್ವರೆಗೆ ರಸ್ತೆ ಹಾಳಾಗಿರುವುದರಿಂದ ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ. ಈ ಬಗ್ಗೆ ಈಗಾಗಲೇ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಂದು ಪ್ರತಿಭಟನೆ ನಡೆಸಿದೆ.
ನಗರದ ತಾಲೂಕು ಕಚೇರಿ ಮುಂಭಾಗವಿರುವ ರಾಷ್ಟ್ರೀಯ ಹೆದ್ದಾರಿ ಉಪ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ರೈತರು, ತಿಂಗಳೊಳಗೆ ರಸ್ತೆ ದುರಸ್ತಿ ಕಾರ್ಯ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.