ಕರ್ನಾಟಕ

karnataka

ETV Bharat / state

'ಫ್ರೀ ಕಾಶ್ಮೀರ್'​ ಪೋಸ್ಟರ್​ ಪ್ರದರ್ಶಿಸಿದ ಪ್ರಕರಣ: ವಿಚಾರಣೆಗೆ ಹಾಜರಾಗಿ ಪ್ರಶ್ನೆಗಳಿಗೆ ಉತ್ತರಿಸಿದ ವಿದ್ಯಾರ್ಥಿನಿ - ಮೈಸೂರು ವಿವಿ ಫ್ರೀ ಕಾಶ್ಮೀರ್​ ಪೋಸ್ಟರ್ ಪ್ರಕರಣ

ದೆಹಲಿಯ ಜೆಎನ್​ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಮೈಸೂರು ವಿವಿ ಆವರಣದಲ್ಲಿ ಜನವರಿ 8 ರಂದು ದೊಡ್ಡ ಮಟ್ಟದ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್​ 'ಫ್ರೀ ಕಾಶ್ಮೀರ್​' ಎಂಬ ಫಲಕವನ್ನು ಹಿಡಿದಿದ್ದು, ಇವರ ವಿರುದ್ಧ ಪ್ರಕರಣ ದಾಖಲಾಗಿತ್ತು.

mysore vv student nalini
ವಿದ್ಯಾರ್ಥಿನಿ ನಳಿನಿ

By

Published : Jan 11, 2020, 9:29 PM IST

ಮೈಸೂರು: ದೆಹಲಿಯ ಜೆಎನ್​ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಮೈಸೂರು ವಿವಿಯಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ 'ಫ್ರೀ ಕಾಶ್ಮೀರ್​' ಪೋಸ್ಟರ್​ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಬಾಲಕುಮಾರ್ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದರು.

ವಿದ್ಯಾರ್ಥಿನಿ ನಳಿನಿ

ದೆಹಲಿಯ ಜೆಎನ್​ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಮೈಸೂರು ವಿವಿ ಆವರಣದಲ್ಲಿ ಜ.8 ರಂದು ದೊಡ್ಡ ಮಟ್ಟದ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್​ 'ಫ್ರೀ ಕಾಶ್ಮೀರ್​' ಎಂಬ ಫಲಕವನ್ನು ಹಿಡಿದಿದ್ದು ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಇವರ ವಿರುದ್ಧ ಜ. 9ರಂದು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ಕೇಸ್ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಹಾಜರಾದ ನಳಿನಿ ಬೆಳಗ್ಗೆ 11 ಗಂಟೆಯಿಂದ ಸಂಜೆವರೆಗೆ ಪೊಲೀಸ್ ಅಧಿಕಾರಿಗಳು ಕೇಳಿದ 150ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದು ಮಾಧ್ಯಮಗಳ ಜೊತೆ ಮಾತನಾಡಿದ ನಳಿನಿ, ಈಗಾಗಲೇ ಈ ಪ್ರಕರಣದ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದೇನೆ. ಅದೇ ವಿಚಾರವನ್ನು ಪೊಲೀಸರಿಗೂ ವಿವರಿಸಿದ್ದೇನೆ. ಅದನ್ನು ಬಿಟ್ಟರೆ ಬೇರೆ ಏನನ್ನು ಹೇಳಲು ಇಚ್ಚಿಸುವುದಿಲ್ಲ ಎಂದರು.

For All Latest Updates

TAGGED:

ABOUT THE AUTHOR

...view details