ಮೈಸೂರು: ರಾಜ್ಯದಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ, ಜನರು ಸಂಕಷ್ಟದಲ್ಲಿದ್ದಾರೆ. ಇದನ್ನು ಅರಿತು ಬಿಜೆಪಿ ಹೈಕಮಾಂಡ್ ಕೂಡಲೇ ರಾಜ್ಯಕ್ಕೆ ಪ್ರಾಮಾಣಿಕ ಹಾಗೂ ದಕ್ಷ ಮುಖ್ಯಮಂತ್ರಿಯನ್ನು ನೇಮಕ ಮಾಡಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಒತ್ತಾಯಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿರುವುದು ನೋವಿನ ಸಂಗತಿ. ಆದ್ರೆ ಎಲ್ಲವೂ ಪಕ್ಷದ ತೀರ್ಮಾನವಾಗಿದೆ. 5 ವರ್ಷ ಸಿಎಂ ಆಗಬೇಕು ಎನ್ನುವುದು ನಮ್ಮ ಆಶಯವಾಗಿತ್ತು. ಎಲ್ಲಾ ವಿಚಾರವನ್ನು ತಿಳಿಸಿ ರಾಜೀನಾಮೆ ನೀಡಿದ್ದಾರೆ. ಇದರಿಂದ ಎಲ್ಲರ ಮನಸ್ಸಿಗೂ ನೋವಾಗಿದೆ ಎಂದರು.