ಮೈಸೂರು:ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸರಿಯಾಗಿ ಲೆಕ್ಕ ಕೊಡದಿದ್ದರೆ ಅಧಿಕಾರಿಗಳು ಕೂಡಲೇ ಸಸ್ಪೆಂಡ್: ಜಿಟಿಡಿ ಖಡಕ್ ಆದೇಶ - ಕಂದಾಯ ಸಚಿವ ಆರ್.ವಿ.ದೇಶಪಾಂಡೆ
ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಯಾ ಇಲಾಖೆಯ ಅಧಿಕಾರಿಗಳು ಸರಿಯಾಗಿ ಲೆಕ್ಕ ತೋರಿಸದಿದ್ದರೆ ಕೂಡಲೇ ಸಸ್ಪೆಂಡ್ ಮಾಡುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿದರು.
ಈ ಸಭೆಯಲ್ಲಿ ಮಾತನಾಡಿದ ಸಚಿವ ಜಿ ಟಿ ದೇವೇಗೌಡ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಜೊತೆಗೆ ಕಂದಾಯ ಇಲಾಖೆಯ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಜಿಲ್ಲೆಯಲ್ಲಿ ಇಂತಹ ಅಧಿಕಾರಿಗಳನ್ನು ಇಟ್ಟುಕೊಂಡಿರುವುದು ನನ್ನ ಹಣೆ ಬರಹ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಲದೆ, ಇಂತಹ ಅಧಿಕಾರಿಗಳನ್ನು ನೋಡಿದರೆ ಎದೆಗೆ ಹೊಡೆದುಕೊಳ್ಳಬೇಕು ಎನಿಸುತ್ತದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ ಜಿ.ಟಿ.ದೇವೇಗೌಡ, ಸ್ಥಳೀಯವಾಗಿ ಬಿಲ್ ಆಗಿದೆಯಾ, ಲೆಕ್ಕ ಸರಿ ಇದೆಯಾ ಎಂದು ಅಧಿಕಾರಿವೋರ್ವನಿಗೆ ತರಾಟೆ ತೆಗೆದುಕೊಂಡರು. ಇನ್ನು ಆಯಾ ಇಲಾಖೆಯ ಅಧಿಕಾರಿಗಳು ಸರಿಯಾಗಿ ಲೆಕ್ಕ ತೋರಿಸದಿದ್ದರೆ ಕೂಡಲೇ ಸಸ್ಪೆಂಡ್ ಮಾಡಿ ಎಂದು ಜಿಲ್ಲಾಧಿಕಾರಿಗೆ ಸಚಿವರು ಆದೇಶಿಸಿದರು. ಸಭೆಯಲ್ಲಿದ್ದ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರು ಜಿಟಿಡಿ ಅವರನ್ನು ಸಮಾಧಾನ ಪಡಿಸಲು ಮುಂದಾದರು.