ಮೈಸೂರು:ಅವಧೂತ ಗಣಪತಿ ಸಚ್ಚಿದಾನಂದ ಆಶ್ರಮದ ಶ್ರೀಗಣಪತಿ ಸಚ್ಚಿದಾನಂದ ಸ್ವಾಮೀಜಿ ದೇಶದಲ್ಲಿ ಪುಣ್ಯದ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸ್ವಾಮೀಜಿ ಆಹಾರವನ್ನು ನೀಡುವ ಮೂಲಕ ಅಪಾರ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಜನರಿಗೆ ಕಷ್ಟದಲ್ಲಿ ಕೈ ಹಿಡಿಯುತ್ತಿದ್ದಾರೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಗಣಪತಿ ಸಚ್ಚಿದಾನಂದ ಶ್ರೀಗಳ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದೇ ವೇಳೆ ಶಾಸಕ ಎಸ.ಎ. ರಾಮದಾಸ್ ಮಾತನಾಡಿ, ಸ್ವಾಮೀಜಿಯವರ 80ನೇ ವರ್ಷದ ಜನ್ಮದಿನದ ಪ್ರಯುಕ್ತ ಮೇಕೆದಾಟು ಪಾದಯಾತ್ರೆ ಮುಗಿಸಿ ಅವರು ನಗರ ಪ್ರವೇಶ ಮಾಡಿದ ಮೈಸೂರು ಪ್ರವೇಶ ದ್ವಾರದ ವೃತ್ತಕ್ಕೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ವೃತ್ತ ಎಂದು ನಾಮಕರಣ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.