ಮೈಸೂರು: ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ಆರಕ್ಕೇರಿದೆ. ಶೀಘ್ರವಾಗಿ 7ನೇ ಆರೋಪಿಯನ್ನು ಬಂಧಿಸುವ ವಿಶ್ವಾಸದಲ್ಲಿ ಪೊಲೀಸರಿದ್ದಾರೆ.
Mysuru Gangrape case: ಸಾಮೂಹಿಕ ಅತ್ಯಾಚಾರ ಪ್ರಕರಣದ ಮತ್ತೊಬ್ಬ ಆರೋಪಿ ಸೆರೆ - mysore latest news
ಆಗಸ್ಟ್ 24ರಂದು ಚಾಮುಂಡಿಬೆಟ್ಟದ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಕಾಮುಕರ ಪೈಕಿ ಐದು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇದೀಗ ಆರನೇ ಆರೋಪಿಯನ್ನು ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
![Mysuru Gangrape case: ಸಾಮೂಹಿಕ ಅತ್ಯಾಚಾರ ಪ್ರಕರಣದ ಮತ್ತೊಬ್ಬ ಆರೋಪಿ ಸೆರೆ ಗ್ಯಾಂಗ್ ರೇಪ್ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ](https://etvbharatimages.akamaized.net/etvbharat/prod-images/768-512-12924754-123-12924754-1630381285428.jpg)
ಗ್ಯಾಂಗ್ ರೇಪ್ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ
ಆಗಸ್ಟ್ 24ರಂದು ಚಾಮುಂಡಿಬೆಟ್ಟದ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಕಾಮುಕರ ಪೈಕಿ, ಐವರನ್ನು ಬಂಧಿಸಲಾಗಿತ್ತು. ಸೋಮವಾರ ಸಂಜೆ ನಾಲ್ವರು ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ಮಾಡಲಾಗಿದೆ. ಇಂದು ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸುವ ಮೂಲಕ ಒಟ್ಟಾರೆ ಆರು ಮಂದಿ ಕಾಮುಕರನ್ನು ಬಂಧಿಸಿದ್ದಾರೆ. ಇನ್ನೊಬ್ಬನನ್ನು ಬಂಧಿಸಲು ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ.