ಕರ್ನಾಟಕ

karnataka

ETV Bharat / state

ತಾಯಿ ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದ ಪುತ್ರಿ ಆತ್ಮಹತ್ಯೆ - ಖಿನ್ನತೆಗೆ ಒಳಗಾಗಿದ್ದ ಬಾಲಕಿ ಆತ್ಮಹತ್ಯೆ

ಮಗಳು ಕೊಠಡಿಯಿಂದ ಆಚೆ ಬಾರದೆ ಇದ್ದಾಗ ಬಾಗಿಲು ತೆಗೆದು ನೋಡಿದಾಗ ಮಗಳು ಆತ್ಮಹತ್ಯೆಗೆ ಶರಣಾಗಿರುವುದು ಕಂಡು ಬಂದಿದೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Girl committed suicide at Mysore
ಮೈಸೂರಲ್ಲಿ ಬಾಲಕಿ ಹತ್ಮಹತ್ಯೆ

By

Published : Dec 31, 2021, 9:03 PM IST

ಮೈಸೂರು :ತಾಯಿ ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಪಿರಿಯಾಪಟ್ಟಣದ ನಿವಾಸಿ ರಮೇಶ್ ಎಂಬುವರ ಪುತ್ರಿ ರಕ್ಷಿತಾ(19) ಮೃತ ದುರ್ದೈವಿ.

ಈಕೆ ಹುಣಸೂರಿನ ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಏಳು ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದರಿಂದ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ.

ಪಿರಿಯಾಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ತಡರಾತ್ರಿ ನೇಣುಬಿಗಿದುಕೊಂಡು ರಕ್ಷಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳು ಕೊಠಡಿಯಿಂದ ಆಚೆ ಬಾರದೆ ಇದ್ದಾಗ ಬಾಗಿಲು ತೆಗೆದು ನೋಡಿದಾಗ ಮಗಳು ಆತ್ಮಹತ್ಯೆಗೆ ಶರಣಾಗಿರುವುದು ಕಂಡು ಬಂದಿದೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೌಟುಂಬಿಕ ಕಲಹ : ನಾಲ್ವರು ಮಕ್ಕಳೊಂದಿಗೆ ಬಾವಿಗೆ ಹಾರಿ ಪ್ರಾಣಬಿಟ್ಟ ತಾಯಿ

ABOUT THE AUTHOR

...view details