ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ಪ್ರಕರಣವನ್ನು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಎಲ್ಲ ತಿಳಿಯಲಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.
ಯುವತಿ ಆತ್ಮಹತ್ಯೆ ಪ್ರಕರಣ: ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲು - Young woman suspected death
ದೊಡ್ಡಕಾನ್ಯ ಗ್ರಾಮದ ಮೀನಾಕ್ಷಿ ಎಂಬ ಯುವತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೊಂದು ಮರ್ಯಾದಾ ಹತ್ಯೆ ಎಂಬ ಬಗ್ಗೆ ಅನುಮಾನಗಳು ಬಂದ ಹಿನ್ನೆಲೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ಎಂದು ತನಿಖೆ ನಡೆಸಲಾಗುತ್ತಿದೆ.
ಯುವತಿ ಆತ್ಮಹತ್ಯೆ ಪ್ರಕರಣ: ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲು
ದೊಡ್ಡಕಾನ್ಯ ಗ್ರಾಮದ ಮೀನಾಕ್ಷಿ ಎಂಬ ಯುವತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದೊಂದು ಮರ್ಯಾದಾ ಹತ್ಯೆ ಎಂಬ ಬಗ್ಗೆ ಅನುಮಾನಗಳು ಬಂದ ಹಿನ್ನೆಲೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದರು.
ಯುವತಿ ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬುದು ತಿಳಿದಿತ್ತು. ಇದೊಂದು ಆತ್ಮಹತ್ಯೆಯೇ, ಮರ್ಯಾದಾ ಹತ್ಯೆಯೇ ಎಂಬ ಬಗ್ಗೆ ನಾನಾ ಅನುಮಾನಗಳಿದ್ದು ಈ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.