ಮೈಸೂರು:ಕಾಡು ಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಗೂಡ್ಸ್ ವಾಹನ ಪಲ್ಟಿಯಾಗಿ 8 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಲಕ್ಷಿಪುರ ಬಳಿ ನಡೆದಿದೆ.
ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಲಕ್ಷಿಪುರ ಬಳಿ ಕಾಡು ಹಂದಿಯೊಂದು ರಸ್ತೆ ದಾಟುತ್ತಿತ್ತು. ಈ ವೇಳೆ ಅದೇ ದಾರಿಯಲ್ಲಿ ಕೂಲಿ ಕಾರ್ಮಿಕರು ಮತ್ತು ವಿದ್ಯಾರ್ಥಿಗಳನ್ನು ಕರೆದುಕೊಂಡು ಸಾಗುತ್ತಿದ್ದ ಗೂಡ್ಸ್ ವಾಹನ ಹಂದಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಹಳ್ಳಕ್ಕೆ ಮಗುಚಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ 8 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.