ಮೈಸೂರು:ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು, ಬೆಂಕಿ ಇಟ್ಟಿರುವ ಕಿಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಚಾಮರಾಜನಗರ ಜಿಲ್ಲೆಯ ಸಂಸದ ಆರ್.ಧ್ರುವನಾರಾಯಣ ತಿಳಿಸಿದರು.
ಬಂಡೀಪುರ ಬೆಂಕಿ ಅನಾಹುತ... ಕಿಡಿಗೇಡಿಗಳ ವಿರುದ್ಧ ಕ್ರಮ: ಧ್ರುವನಾರಾಯಣ್
ಬಂಡೀಪುರದಲ್ಲಿ ನಡೆದ ಕಾಡ್ಗಿಚ್ಚಿನಿಂದಾಗಿ ಅಪಾರ ಪ್ರಮಾಣದಲ್ಲಿ ಪ್ರಾಣಿ ಪಕ್ಷಿಗಳು ಸಾವನ್ನಪ್ಪಿದ್ದು, ತುಂಬ ಬೇಸರವಾಗಿದೆ.ಈ ಘಟನೆಗೆ ಕಾರಣವಾದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನಾರಾಯಣ್ ತಿಳಿಸಿದರು.
ಧ್ರುವನಾರಾಯಣ
34ನೇ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಂಡೀಪುರದಲ್ಲಿ ನಡೆದ ಕಾಡ್ಗಿಚ್ಚಿನಿಂದಾಗಿ ಅಪಾರ ಪ್ರಮಾಣದಲ್ಲಿ ಪ್ರಾಣಿ ಪಕ್ಷಿಗಳು ಸಾವನ್ನಪ್ಪಿದ್ದು, ತುಂಬ ಬೇಸರವಾಗಿದೆ. ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರದಿಂದ ಅಲ್ಲಿಯೇ ಉಳಿದುಕೊಂಡು ಘಟನೆ ಕುರಿತದಾದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಈ ಘಟನೆಗೆ ಕಾರಣವಾದ ಕಿಡಿಗೇಡಿಗಳ ಹುಡುಕಾಟದಲ್ಲಿ ಅಧಿಕಾರಿಗಳು ತೊಡಗಿದ್ದು, ಬೆಂಕಿ ಹಚ್ಚಿರುವ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.