ಮೈಸೂರು: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮತ್ತಷ್ಟು ಅಲರ್ಟ್ ಆಗಿರುವ ಮೈಸೂರು ಗ್ರಾಮಾಂತರ ಅಬಕಾರಿ ಇಲಾಖೆ, ವಿವಿಧ ಕಡೆ ದಾಳಿ ನಡೆಸಿ ಸುಮಾರು 10 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕಕೊಂಡು 18 ವಾಹನಗಳನ್ನ ಜಪ್ತಿ ಮಾಡಿದ್ದಾರೆ.
ಅಬಕಾರಿ ಉಪ ಆಯುಕ್ತೆ ಡಾ. ಮಹಾದೇವಿ ನೇತೃತ್ವದಲ್ಲಿ ದಾಳಿ ಮಾಡಿದ ಅಬಕಾರಿ ಪೊಲೀಸರು, 10 ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದಾರೆ. 553.192 ಲೀ. ಮದ್ಯ ಮತ್ತು 16.470 ಲೀ. ಬಿಯರ್ ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ.