ಮೈಸೂರು:ಮದುವೆ ನಿಗದಿಯಾಗಿದ್ದ ಯುವಕ ಕೊರೊನಾಗೆ ಬಲಿಯಾಗಿರುವ ಘಟನೆ ಮೈಸೂರಿನ ಹೆಬ್ಬಾಳುವಿನಲ್ಲಿ ನಡೆದಿದೆ.
ನವೀನ್ (31) ಮೃತ ದುರ್ದೈವಿ. ಈತ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು ಮಾ.7 ರಂದು ನಿಶ್ಚಿತಾರ್ಥವಾಗಿತ್ತು. ಮೇ 19 ಮತ್ತು 20 ಮದುವೆ ದಿನಾಂಕವೂ ಫಿಕ್ಸ್ ಆಗಿತ್ತು. ಇವರಿಗೆ ಕೆಮ್ಮು ಕಾಣಿಸಿಕೊಂಡ ಕಾರಣ ಪರೀಕ್ಷೆ ಮಾಡಿಸಿದಾಗ ಕೊರೊನಾ ಸೋಂಕು ದೃಢಪಟ್ಟಿದೆ. ಬಳಿಕ ಉಸಿರಾಟದ ತೊಂದರೆಯೂ ಉಂಟಾಗಿದ್ದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.