ಕರ್ನಾಟಕ

karnataka

ETV Bharat / state

ಜೆಡಿಎಸ್​ನಿಂದ ಅಂತರ ಮುಂದುವರಿಕೆ: ಪಕ್ಷ ಬಿಡ್ತಾರಾ ಜಿಟಿಡಿ? - mysore news

ಜಿ.ಟಿ.ದೇವೇಗೌಡರ ಬಗ್ಗೆ ಸಾ.ರಾ.ಮಹೇಶ್ ಕಿಡಿಕಾರಿದ್ದಾರೆ. ಅಲ್ಲದೇ,  ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿ ಜಿ.ಟಿ.ದೇವೇಗೌಡರ ಬಗ್ಗೆ ಗರಂ ಆಗಿದ್ದರು.

ಜಿಟಿಡಿ

By

Published : Sep 21, 2019, 12:06 PM IST

ಮೈಸೂರು: ಜೆಡಿಎಸ್ ಪಕ್ಷದಲ್ಲಿ ಜಿ.ಟಿ.ದೇವೇಗೌಡರ ಮುನಿಸು ತಾರಕಕ್ಕೇರಿದೆ. ಈ ಹಿನ್ನೆಲೆ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ಮೈಸೂರಿನ ನಡೆದ ಚಿಂತನ ಮಂಥನ ಸಭೆಯಲ್ಲಿ ಭಾಗವಹಿಸದೇ ಅಂತರ ಕಾಯ್ದುಕೊಂಡಿದ್ದ ಜಿ.ಟಿ.ದೇವೇಗೌಡರ ಬಗ್ಗೆ ಸಾ.ರಾ.ಮಹೇಶ್ ಕಿಡಿಕಾರಿದ್ದಾರೆ. ಅಲ್ಲದೇ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿ ಜಿ.ಟಿ.ದೇವೇಗೌಡರ ಬಗ್ಗೆ ಗರಂ ಆಗಿದ್ದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೇ ಹೊರನಡೆದ ಜಿಟಿಡಿ

ದಟ್ಟಗಳ್ಳಿಯಲ್ಲಿ ಸಾ.ರಾ.ಸಭಾಂಗಣದಲ್ಲಿ ಇಂದು ನಡೆಯುತ್ತಿರುವ ಮೈಸೂರು ಭಾಗದ ಶಾಸಕರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸದೇ ದೂರ ಉಳಿದಿರುವ ಜಿ.ಟಿ.ದೇವೇಗೌಡ ಅವರನ್ನು ಮಾಧ್ಯಮಗಳು ಮಾತನಾಡಿಸಲು ಮುಂದಾದಾಗ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಇನ್ನು ಜೆಡಿಎಸ್ ಬಿಡುವ ಮನಸ್ಸನ್ನು ಜಿ.ಟಿ.ದೇವೇಗೌಡರು ಮಾಡಿದ್ದಾರೆ ಎಂಬ ಮಾತುಗಳು ಬಲ್ಲ ಮೂಲಗಳಿಂದ ಕೇಳಿ ಬರುತ್ತಿವೆ.

ABOUT THE AUTHOR

...view details