ಮೈಸೂರು:ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ನಾಯಕರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಭಾಗವಹಿಸಿದ್ದು ವಿಶೇಷವಾಗಿತ್ತು.
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ 69ನೇ ಹುಟ್ಟುಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಮೈಸೂರು ನಗರದ ವಿವಿಧ ಕಡೆ ಬಿಜೆಪಿ ನಾಯಕರು ಹಾಗೂ ಹಲವಾರು ಸಂಘ ಸಂಸ್ಥೆಗಳು ಸದಸ್ಯರು ವಿವಿಧ ರೀತಿಯಲ್ಲಿ ನಮೋ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.