ಕರ್ನಾಟಕ

karnataka

By

Published : Apr 15, 2023, 11:01 PM IST

ETV Bharat / state

ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್ ನಾಮಪತ್ರ ಸಲ್ಲಿಕೆ..

ಮೈಸೂರು ಜಿಲ್ಲೆಯ ಇಂದು 5 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳ 20 ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

Etv Bharatgt-devegowda-son-harish-files-nomination-in-hunsur-constituency
ಹುಣಸೂರು ಕ್ಷೇತ್ರದಿಂದ ಜಿಟಿಡಿ ಪುತ್ರ ಹರೀಶ್ ನಾಮಪತ್ರ ಸಲ್ಲಿಕೆ..

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲೆಯಲ್ಲಿ ಇಂದು 5 ವಿಧಾನಸಭಾ ಕ್ಷೇತ್ರಗಳಲ್ಲಿ 20 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಜನತಾದಳ (ಸೆಕ್ಯೂರ್ಲ) ಅಭ್ಯರ್ಥಿಯಾಗಿ ಕೆ.ಮಹದೇವ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಗುರುಮೂರ್ತಿ ಜೋಗನಹಳ್ಳಿ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪಿ.ಎಸ್.ನವೀನ್ ಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಯಡಿಯೂರಪ್ಪ ಮತ್ತು ಬಿ.ಎಸ್. ಸುಬ್ರಹ್ಮಣ್ಯ ನಾಮಪತ್ರ ಸಲ್ಲಿಸಿದ್ದಾರೆ.

ಹುಣಸೂರು ವಿಧಾನ ಸಭಾ ಕ್ಷೇತ್ರದಿಂದ ಜನತಾದಳ (ಸೆಕ್ಯೂಲರ್​) ಪಕ್ಷದ ಅಭ್ಯರ್ಥಿ ಜಿ.ಡಿ. ಹರೀಶ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್.ಪಿ. ಮಂಜುನಾಥ್, ಪಕ್ಷೇತರ ಅಭ್ಯರ್ಥಿ ಉಮೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಹೆಚ್. ಹನುಮಯ್ಯ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಎಂ.ಪಿ. ವಿಜಯ್ ಕುರ್ಮಾ ನಾಮಪತ್ರ ಸಲ್ಲಿಸಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಮಾಳವಿಕ ಗುಬ್ಬಿ ವಾಣಿ, ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ವಿ. ಪ್ರಭ ಹಾಗೂ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್​ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿ ಜಿ.ಎಸ್.ಸೀಮಾ ಅವರು ನಾಮಪತ್ರ ಸಲ್ಲಿಸಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ಲೀಲಾವತಿ ಜಿ.ಎಸ್, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್​ ಇಂಡಿಯಾ ಅಭ್ಯರ್ಥಿ ಅಮ್ಜದ್ ಖಾನ್, ಪಕ್ಷೇತರ ಅಭ್ಯರ್ಥಿಯಾಗಿ ಅಜೀಜುಲ್ಲಾ ಅಜ್ಜು ಅವರು ನಾಮ ಪತ್ರ ಸಲ್ಲಿಸಿದ್ದಾರೆ.

ಹೆಚ್.ಡಿ. ಕೋಟೆ, ಚಾಮುಂಡೇಶ್ವರಿ, ಕೃಷ್ಣರಾಜ, ವರುಣಾ ಹಾಗೂ ಟಿ.ನರಸೀಪುರ ಕ್ಷೇತ್ರಗಳಿಗೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ. ರಾಜೇಂದ್ರ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ದಾವಣಗೆರೆ ಉತ್ತರ ಕ್ಷೇತ್ರ: ಕಾಂಗ್ರೆಸ್​ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಕೆ

ಶಿಗ್ಗಾವಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಸಿಎಂ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾವಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಚುನಾವಣಾ ಅಫಿಡವಿಟ್​​ ಸಲ್ಲಿಸಿರುವ ಬೊಮ್ಮಾಯಿ ಒಟ್ಟು 5.98 ಕೋಟಿ ರೂ. ಚರಾಸ್ತಿ ಮತ್ತು 22.95 ಕೋಟಿ ರೂ. ಸ್ಥಿರಾಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಸ್ವಂತ ವಾಹನ ಹೊಂದಿಲ್ಲ. ಅಲ್ಲದೆ ಒಟ್ಟು 5.79 ಕೋಟಿ ರೂ. ಸಾಲವನ್ನು ಹೊಂದಿರುವುದಾಗಿ ಬೊಮ್ಮಾಯಿ ಹೇಳಿದ್ದಾರೆ.

ಇನ್ನು, ತಮ್ಮ ಪತ್ನಿ ಬಳಿ ಯಾವುದೇ ಸ್ಥಿರಾಸ್ತಿ ಇಲ್ಲ. 1.14 ಕೋಟಿ ರೂ. ಚರಾಸ್ತಿ ಹೊಂದಿದ್ದಾರೆ. ತಮ್ಮ ಹಿಂದೂ ಅವಿಭಜಿತ ಕುಟುಂಬದಲ್ಲಿ 1.57 ಕೋಟಿ ರೂ. ಚರಾಸ್ತಿ, 19.20 ಕೋಟಿ ರೂ. ಸ್ಥಿರಾಸ್ತಿ ಇದೆ. ಪುತ್ರಿ ಹೆಸರಲ್ಲಿ 1.28 ಕೋಟಿ ರೂ. ಚರಾಸ್ತಿ ಹೊಂದಿರುವುದಾಗಿ ಸಿಎಂ ತಿಳಿಸಿದ್ದಾರೆ.

ಮೊದಲ ದಿನವೇ ನಾಮಪತ್ರ ಸಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟೇಶ್ ಮೊದಲ ದಿನವೇ ನಾಮಪತ್ರ ಸಲ್ಲಿಸಿದ್ದರು. ತಮ್ಮ ಚುನಾವಣಾ ಅಫಿಡವಿಟ್​ನಲ್ಲಿ ಒಟ್ಟು ಆಸ್ತಿ ಮೌಲ್ಯ 11 ಕೋಟಿ ರೂ. ತೋರಿಸಿದ್ದು, ಈ ಪೈಕಿ 1.12 ಕೋಟಿ ರೂ ಚರಾಸ್ತಿ ಹಾಗೂ 10.64 ಕೋಟಿ ರೂ.ಮೌಲ್ಯದ ಸ್ಥಿರಾಸ್ತಿ ಹೊಂದಿರುವುದಾಗಿ ಹೇಳಿದ್ದರು.

ABOUT THE AUTHOR

...view details