ನಂಜನಗೂಡು(ಮೈಸೂರು): ಜೀವನದಲ್ಲಿ ಜಿಗುಪ್ಸೆಗೊಂಡು ಜಿಮ್ ಟ್ರೈನರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ನಗರದ ಸಿದ್ದೇಗೌಡ ಲೇಔಟ್ನಲ್ಲಿ ನಡೆದಿದೆ. ಶಬರೀಶ್(35) ಮೃತರು.
ನಂಜನಗೂಡಿನಲ್ಲಿ ವಜ್ರದೇಹಿ ಎಂಬ ಹೆಸರಿನ ಜಿಮ್ನಲ್ಲಿ ಟ್ರೈನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಬರೀಶ್ ಮಂಗಳವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವಾಹಿತ ಮಹಿಳೆ ಮತ್ತು ಯುವಕ ಆತ್ಮಹತ್ಯೆ:ಹುಣಸೂರು ತಾಲೂಕಿನ ಕಲ್ಕುಣಿಕೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ವಿವಾಹಿತ ಮಹಿಳೆ ಮತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ವಿವಾಹಿತ ಮಹಿಳೆಯ ಜೊತೆಗಿರುವ ಫೋಟೋವನ್ನು ಯುವಕ ತನ್ನ ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಹಾಕಿಕೊಂಡಿದ್ದ. ಇದು ವೈರಲ್ ಆಗುತ್ತಿದ್ದಂತೆ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದಿತ್ತು.
ಮಹಿಳೆ ಆತ್ಮಹತ್ಯೆಗೆ ಯುವಕ ಕಾರಣ ಎಂದು ಯುವತಿಯ ಕುಟುಂಬದವರು ಕೆ.ಆರ್.ನಗರ ಠಾಣೆಯಲ್ಲಿ ಯುಡಿಆರ್ ದೂರು ನೀಡಿದರೆ, ಮಹಿಳೆ ಕುಟುಂಬದವರ ವಿರುದ್ಧ ಪ್ರತಿಯಾಗಿ ಯುವಕನ ಕಡೆಯವರು ನಗರ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲು ಮಾಡಿದ್ದಾರೆ. ಡಿವೈಎಸ್‌ಪಿ ಗೋಪಾಲಕೃಷ್ಣ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಜೋಡಿ ಆಟೋ ಡ್ರೈವರ್ ಮನೆಯಲ್ಲಿ ಆತ್ಮಹತ್ಯೆ