ಮೈಸೂರು: ಕಾಂಗ್ರೆಸ್ ಪಾಪದ ಫಲ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಗೆ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.
ಕಾಂಗ್ರೆಸ್ ಪಾಪದ ಫಲವೇ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಕಾರಣ: ಎಚ್.ವಿಶ್ವನಾಥ್
ಕಾಂಗ್ರೆಸ್ ಪಾಪದ ಫಲವೇ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆಗೆ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್
ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬಿದ್ದಾಗ ಸಾಂತ್ವನ ಹೇಳುವ ಬದಲು ಗಲಭೆ ಮಾಡಿದವರ ಮನೆಗೆ ಹೋಗಿ ಸಾಂತ್ವನ ಹೇಳ್ತಾರೆ. ಕಾಂಗ್ರೆಸ್ ಗಲಭೆ ವಿಚಾರದಲ್ಲಿ ರಾಜಕಾರಣ ಮಾಡುತ್ತಿದೆ. ಬಿಜೆಪಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.
ಸಿಎಎ ವಿಚಾರದಲ್ಲಿ ಉದ್ರೇಕಕಾರಿ ಭಾಷಣ ಮಾಡಿ, ಜೈಲಿಗೆ ಹೋಗಿ ಬಂದವರಿಗೆ ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಈ ಘಟನೆಗೆ ಕಾಂಗ್ರೆಸ್ ಹಾಗೂ ಬೇರೆ ಬೇರೆ ಸಂಘಟನೆಗಳ ಬೆಂಬಲವಿದೆ. ಬಿಜೆಪಿಗೆ ಇಂತಹ ಗಲಭೆ ಸೃಷ್ಟಿಸುವ ಅಗತ್ಯವಿಲ್ಲ ಎಂದರು.
Last Updated : Aug 14, 2020, 11:47 AM IST