ಮೈಸೂರು:ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸುತ್ತಿದ್ದರೆ ಅವರಿಗೆ ಕಾಂಗ್ರೆಸ್ ಪಕ್ಷವನ್ನು ಮುಳುಗಿಸುವ ಹುನ್ನಾರವಿದೆ ಎನಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಂದು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ಕಡೆ ಬಲಗೈ ದಲಿತರು ಮತ ಹಾಕಿಲ್ಲ ಎಂದು ಹೇಳಿ, ಇದರಿಂದ ಅವರ ಮತ ಬ್ಯಾಂಕ್ ಹಾಳಾಗಿದೆ. ನಿಮಗೆ ನಾನು(ಸಿದ್ದರಾಮಯ್ಯ) ಸಿಎಂ ಆದ ಮೇಲೆ ಬೇರೆ ಯಾರು ಸಿಎಂ ಆಗಬಾರದು ಅನ್ನೋ ಮನೋಭಾವವಿದೆ. ಇದನ್ನು ಕಾಂಗ್ರೆಸ್ ನಾಯಕರು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.
140 ಸ್ಥಾನ ಗೆಲ್ಲುವ ಕಾಂಗ್ರೆಸ್ ಪಕ್ಷ 20 ಸ್ಥಾನ ಗೆಲ್ಲುವುದಿಲ್ಲವೇ ಅನ್ನೋ ಚರ್ಚೆ ಆರಂಭವಾಗಿದೆ. ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ದುರಂಹಕಾರದ ಮಾತನ್ನು ನಿಲ್ಲಿಸಿ ಎಂದು ಅವರು ಹೇಳಿದರು.
ಕೊಡಗಿನವರು ಹಸು ಮಾಂಸ ತಿನ್ನುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೊಡವರು ಹಸುವನ್ನು ಪೂಜೆ ಮಾಡುತ್ತಾರೆ. ಇದು ಕೊಡವರಿಗೆ ಮಾಡಿದ ಅವಮಾನ. ನಿಮ್ಮ ಹೇಳಿಕೆಗೆ ನೀವೇ ಕೊಡವರ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದರು.