ಮೈಸೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಅನರ್ಹ ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಫೋನ್ ಕದ್ದಾಲಿಕೆ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ನಾನು: ಹೆಚ್. ವಿಶ್ವನಾಥ್
ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ. ನಾನು ಮೊದಲೇ ಈ ವಿಚಾರವನ್ನು ಪ್ರಸ್ತಾಪಿಸಿದ್ದೆ. ಈಗ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು, I am very happy ಎಂದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಬಿಐ ಒಂದು ಸಾಂವಿಧಾನಿಕ ಸಂಸ್ಥೆ. ಅಂತಹ ಸಂಸ್ಥೆ, ಇಂತಹ ಗಂಭೀರ ಪ್ರಕರಣ ತನಿಖೆ ಮಾಡುತ್ತಿರುವುದು ಸ್ವಾಗತಾರ್ಹ. ಬೇಹುಗಾರಿಕ ಸಂಸ್ಥೆ ಮುಖ್ಯಮಂತ್ರಿಗಳ ಬಳಿ ಇರುತ್ತೆ. ಅವರ ಅಣತಿಯಂತೆ ಈ ಕೆಲಸ ನಡೆದಿದೆ. ತನಿಖೆಯಿಂದ ಎಲ್ಲಾ ಸತ್ಯಗಳು ಹೊರಬರಲಿವೆ. ಕುಂಬಳಕಾಯಿ ಕಳ್ಳ ಅಂದ್ರೆ ಯಾರಾದ್ರಾ ಬೆನ್ನು ಮುಟ್ಟಿ ನೋಡಿಕೊಳ್ತಾರಾ ಎಂದು ಪ್ರಶ್ನಿಸಿದರು.
ಇನ್ನು ಸಿದ್ದರಾಮಯ್ಯ ಸೇರಿದಂತೆ ಸಾಕಷ್ಟು ಕಾಂಗ್ರೆಸ್ ನಾಯಕರು ಸಿಬಿಐ ತನಿಖೆ ಆಗಲಿ ಎಂದು ಒಕ್ಕೋರಲಿನಿಂದ ಒತ್ತಾಯಿಸಿದ್ದಾರೆ. ಈ ವಿಚಾರವನ್ನು ಮೊದಲು ಪ್ರಸ್ತಾಪ ಮಾಡಿದ್ದೇ ನಾನು. ಈಗ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದೆ ಐ ಆ್ಯಮ್ ಸೋ ಹ್ಯಾಪಿ ಎಂದು ವಿಶ್ವನಾಥ್ ಹೇಳಿದ್ರು.