ಮೈಸೂರು: ರಾಜ್ಯದಲ್ಲಿ ಇರುವುದು ಬಿಜೆಪಿ ಸರ್ಕಾರವಲ್ಲ. ಇಲ್ಲಿರುವುದು ನ್ಯಾಷನಲ್ ಸರ್ಕಾರ. ಯಡಿಯೂರಪ್ಪ ಎಲ್ಲರನ್ನು ಅಡ್ಜೆಸ್ಟ್ ಮಾಡಿಕೊಂಡು ನ್ಯಾಷನಲ್ ಗೌರ್ವನಮೆಂಟ್ ನಡೆಸುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧವೇ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಸಿದ್ದು, ಹೆಚ್ಡಿಕೆ, ಬಿಎಸ್ವೈ ಒಬ್ಬರನ್ನೊಬ್ಬರು ರಕ್ಷಿಸುತ್ತಿದ್ದಾರೆ: ಹೆಚ್.ವಿಶ್ವನಾಥ್ - Yediyurappa
ಮಂತ್ರಿ ಸ್ಥಾನದಿಂದ ವಂಚಿತರಾಗಿರುವ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಮ್ಮ ಬಿಜೆಪಿ ಸರ್ಕಾರದ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯರನ್ನ ಕುಮಾರಸ್ವಾಮಿ ರಕ್ಷಣೆ ಮಾಡ್ತಾರೆ. ಕುಮಾರಸ್ವಾಮಿಯನ್ನು ಸಿದ್ದರಾಮಯ್ಯ ರಕ್ಷಣೆ ಮಾಡ್ತಾರೆ. ಇಬ್ಬರು ಸೇರಿ ಯಡಿಯೂರಪ್ಪರನ್ನ ರಕ್ಷಿಸಿ ಒಬ್ಬೊರಿಗೊಬ್ಬರು ಅಡ್ಜೆಸ್ಟ್ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ. ಯಡಿಯೂರಪ್ಪ ನ್ಯಾಷನಲ್ ಗೌರ್ನಮೆಂಟ್ ಚೀಫ್ ಮಿನಿಸ್ಟರ್. ಅವರವರ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ರೀತಿ ರಾಜಕೀಯ ಮಾಡುತ್ತಿದ್ದಾರೆ. ನಾವು ಯಾವ ಪುರುಷಾರ್ಥಕ್ಕೆ ದಂಗೆ ಎದ್ದು ಸರ್ಕಾರ ಬೀಳಿಸಿದ್ವಿ ಎಂದು ಈಗ ಅನಿಸುತ್ತಿದೆ. ಭ್ರಷ್ಟಾಚಾರ ಮತ್ತು ಈಗಿನ ಸಿಡಿಯಲ್ಲೂ ಅಡ್ಜಸ್ಟ್ಮೆಂಟ್ ನಡೆದಿದೆ.
ಸಿದ್ದರಾಮಯ್ಯ ಅರ್ಕಾವತಿ ಹಗರಣ ಮುಚ್ಚಿಕೊಳ್ಳಲು ಮತ್ತು ಕುಮಾರಸ್ವಾಮಿ ಫೋನ್ ಕದ್ದಾಲಿಕೆ ಪ್ರಕರಣ ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಲಸಿಕೆ ಯಾವಾಗ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರಕ್ಕೆ ತಿರುಗೇಟು ನೀಡಿ, ಇದ್ದ ಲೋಕಾಯುಕ್ತ ಎಂಬ ಲಸಿಕೆ ನಾಶ ಮಾಡಿದವರು ಸಿದ್ದರಾಮಯ್ಯ. ಬ್ರಿಟಿಷರು ಹೇಗೆ ಭಾರತಕ್ಕೆ ಬಂದು ಭಾರತಿಯರನ್ನೇ ಓಡಾಡಿಸಿದರೋ ಅದೇ ರೀತಿ ಸಿದ್ದರಾಮಯ್ಯ ಅಂಡ್ ಗ್ಯಾಂಗ್ ಮೂಲ ಕಾಂಗ್ರೆಸಿಗರನ್ನು ಓಡಾಡಿಸುತ್ತಿದೆ. ವಲಸಿಗರೆಲ್ಲ ಸೇರಿ ಮೂಲ ಕಾಂಗ್ರೆಸಿಗರನ್ನ ಮುಗಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.