ಮೈಸೂರು: ಸಿಡಿ ಮೂಲಕ ಮುಖ್ಯಮಂತ್ರಿಗಳನ್ನೇ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಇಂದು ನಗರದ ಆರ್ ಗೇಟ್ ಬಳಿ ಆನ್ಲೈನ್ ಪರೀಕ್ಷೆ ನಡೆಸಿ ಎಂದು ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಕಳೆದ ವಾರದಿಂದ ಸಿಡಿ ವಿಚಾರ ಚರ್ಚೆಯಾಗುತ್ತಿದೆ. ಸಿಡಿ ಮಾಡುವುದು ಅಪರಾಧ, ಕರ್ನಾಟಕದ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದಿದ್ದಾರೆ.