ಮೈಸೂರು :ನಿರ್ಗಮಿತ ಜಿಲ್ಲಾಧಿಕಾರಿರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನ ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ನೋಟಿಸ್ ನೀಡಿದೆ.
ಚಾಮುಂಡಿ ಬೆಟ್ಟದ ತಪ್ಪಲಿನ ಕುರುಬಾರಹಳ್ಳಿ ಸರ್ವೆ ನಂ. 4 ರ ಭೂ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಇತ್ತೀಚೆಗೆ ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು.
ಅದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪಾಲನೆ ಮಾಡದ ಹಿನ್ನೆಲೆ ಭೂ ಮಾಲೀಕರು ರೋಹಿಣಿ ಸಿಂಧೂರಿ ವಿರುದ್ಧ ಕ್ರಿಮಿನಲ್ ರೂಪದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಓದಿ : ಚಾಮುಂಡಿಬೆಟ್ಟದ ತಪ್ಪಲಿನ ಆಸ್ತಿ ವಿವಾದ : ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಸರ್ಕಾರ ತಕ್ಷಣ ಭೂ ಮಾಲೀಕರ ಹೆಸರಿಗೆ ಖಾತೆ ಮಾಡದಿದ್ದರೆ ಸಿಂಧೂರಿಗೆ ಸಂಕಷ್ಟ ಎದುರಾಗಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ಸಿಂಧೂರಿ ಹಾಗೂ ಮೈಸೂರು ತಹಶೀಲ್ದಾರ್ ಕೆ.ಆರ್. ರಕ್ಷಿತ್ಗೆ ಕೋರ್ಟ್ ನೊಟೀಸ್ ನೀಡಿದೆ.